ದಿನದ ಸುದ್ದಿ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ | ರೈತರ ಖಾತೆಗೆ ನಾಳೆ ಪ್ರಧಾನಿ ಹಣ ವರ್ಗಾವಣೆ ; ಎಷ್ಟು ಕೋಟಿ..?
ಸುದ್ದಿದಿನಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ ’ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ 9 ಕೋಟಿ 3 ಲಕ್ಷ ರೈತರ ಖಾತೆಗೆ 20 ಸಾವಿರ ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಲಿದ್ದಾರೆ.
ವಾರಾಣಸಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರು, ಮೂರನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಹಣ ವರ್ಗಾವಣೆ ಮಾಡಲಿದ್ದಾರೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಪ್ರಧಾನಿ ನರೇಂದ್ರ ಮೋದಿ, ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಸಹಿ ಹಾಕಿದ್ದರು.
2019ರಲ್ಲಿ ದೇಶದ ರೈತರ ಹಿತದೃಷ್ಟಿಯಿಂದ ಈ ಯೋಜನೆ ಜಾರಿಗೆ ಬಂದಿತ್ತು. ವರ್ಷಕ್ಕೆ ಆರು ಸಾವಿರ ರೂಪಾಯಿಯನ್ನು ತಲಾ 2 ಸಾವಿರದಂತೆ ಮೂರು ಕಂತುಗಳ ಮೂಲಕ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243