Connect with us

ದಿನದ ಸುದ್ದಿ

ಬಳ್ಳಾರಿ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಹಗಲು ದರೋಡೆ ; ಹಣ ಕೊಡದಿದ್ರೆ ಪರೀಕ್ಷೇಲಿ ಫೇಲ್ ..! ವಿದ್ಯಾರ್ಥಿಗಳ ಗೋಳು ಕೇಳೋರ್ ಯಾರು..? ಓದಿ ಈ ಸ್ಟೋರಿ..!

Published

on

  • ವಿಶೇಷ ವರದಿ : ಗಿರೀಶ್ ಕುಮಾರ್, ಬಳ್ಳಾರಿ

ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ನಗರದ ಕಿಷ್ಕಿಂದ ವಿಶ್ವವಿದ್ಯಾಲಯ ಆರಂಭವಾಗಿ ಎರಡು ವರ್ಷ ಕಳೆದಿಲ್ಲ, ಆಗಾಲೇ ವಿದ್ಯಾರ್ಥಿಗಳಿಗೆ ಡೋನೇಷನ್ ಹಾವಾಳಿ ಹೆಚ್ಚಾಗಿದೆ. ಚೆನ್ನಾಗಿ ಪರೀಕ್ಷೆ ಬರೆದರು, 4-5 ಪುಟಗಳ ಮೌಲ್ಯಮಾಪನ ಮಾಡದೇ ಇರೋದು. ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ನಕಲು ಪ್ರತಿ ಕೇಳಿದರೇ ಕೊಡೀದಿಲ್ಲ ಎನ್ನುವ ಬಹು ದೊಡ್ಡ ಆರೋಪ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಂದ ಕೇಳಿಬಂದಿದೆ.

ಹಾಜರಾತಿ 85 ಶೇಕಡ ಏಕೆ..?

ಈ ಬಳ್ಳಾರಿ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ದೇಶದ ಯಾವುದೇ ವಿಶ್ವವಿದ್ಯಾಲಯದಲ್ಲಿ ಇರದೇ ಇರೋ ನಿಯಮಗಳು ಇಲ್ಲಿ ಇದೆ. ರಾಜ್ಯ ಮತ್ತು ದೇಶದ ವಿಶ್ವವಿದ್ಯಾಲಯಗಳಲ್ಲಿ ಪ್ರತಿಯೊಂದು ವಿದ್ಯಾರ್ಥಿಗೆ ಶೇಕಡ 75 ಹಾಜರಾಗಿ ಇದ್ದರೆ, ಈ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ 85 ಶೇಕಡಾ ಹಾಜರಾತಿ ಅಂತೆ, ಇಲ್ಲದಿದ್ದರೇ ದಂಡ ಹಾಕುತ್ತಾರೆ ಎನ್ನುವ ಆರೋಪ ಸಹ ಇದೆ. ಪರೀಕ್ಷೆ ಸಮಯದಲ್ಲಿ ದಂಡದ ಹಣ ನೀಡದಿದ್ದರೆ ಹಾಲ್ ಟಿಕೆಟ್ ಕೊಡಲ್ಲವಂತೆ.

ನಗದು ಹಣ 60 ಸಾವಿರ ಡೋನೆಷನ್ ನೀಡಲು ಒತ್ತಾಯ

ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಓದುವ ವಿದ್ಯಾರ್ಥಿಗಳಿಗೆ 1 ಲಕ್ಷ 60 ಸಾವಿರ ಆನ್ ಲೈನ್ ಮೂಲಕ ಶುಲ್ಕ ಪಾವತಿ ಮಾಡಿಸಿಕೊಂಡು ನಂತರ ಪರೀಕ್ಷೆ ಹತ್ತಿರ ಬರುವ ಮುಂಚೆಯೇ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ 60 ಸಾವಿರ ನಗದು ರೂಪಾಯಿ ಹಣವನ್ನು ನೀಡಬೇಕೆಂದು ಒತ್ತಾಯ ಮಾಡುತ್ತಾರೆ, ಹಣ ಕಟ್ಟದಿದ್ದರೆ ಪರೀಕ್ಷೆಯಲ್ಲಿ ಅನುತ್ತೀರ್ಣಾ ಮಾಡುತ್ತಾರೆ ಎನ್ನುವ ಆರೋಪ ಇದೆ. ಒಂದು ಪರೀಕ್ಷೆ ಅನುತ್ತಿಣಾ ಹೊಂದಿದ್ದರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಅದಕ್ಕೆ ಪ್ರತ್ಯೇಕವಾಗಿ ಹಣವನ್ನು ಕಟ್ಟಬೇಕು ಅದು ಸಹ ದುಬಾರಿ ಇದೆ. ಒಂದು ವಿಷಯಕ್ಕೆ ಒಬ್ಬ ವಿದ್ಯಾರ್ಥಿಗೆ 700 ರೂಪಾಯಿ ಪಾವತಿಸಬೇಕು.

ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ

ಕಿಷ್ಕಿಂದ ವಿಶ್ವವಿದ್ಯಾಲಯ ಆಗಿರುವುದರಿಂದ ಇಲ್ಲಯೇ ಪ್ರಶ್ನೆ ಪತ್ರಿಕೆ ತಯಾರಾಗುತ್ತದೆ ಹಾಗೇಯೇ ಇಲ್ಲಿಯ ಉಪನ್ಯಾಸಕರು ಮೌಲ್ಯಮಾಪನ ಮಾಡುತ್ತಾರೆ ಆದರೆ ಈ ಉಪನ್ಯಾಸಕರು ಮೇಲೆ ಆಡಳಿತ ಮಂಡಳಿ ವಿ.ವಿ ಒತ್ತಾಯ ಇದೆಯೇ ಎನ್ನುವ ಪ್ರಶ್ನೆ ಕಾಡುತ್ತದೆ.

ಇನ್ನು ಮೂರು – ನಾಲ್ಕು ವರ್ಷ ಹೇಗೆ ? ಓದು ಪೂರ್ಣಗೊಳಿಸಬೇಕು ಅನ್ನೋ ಭಯ

ಈ ಕಿಷ್ಕಿಂದ ವಿಶ್ವವಿದ್ಯಾಲಯ ಬಳ್ಳಾರಿ ನಗರದಲ್ಲಿ ಹೊಸದಾಗಿ ಆರಂಭವಾಗಿದೆ. ಕಡಿಮೆ ಹಣ ಎಂದು ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಇನ್ನು ನಮ್ಮ ಮಕ್ಕಳು ವಿದ್ಯಾಭ್ಯಾಸ ಗತಿ ಹೇಗೆ ? ಎಂದು ಭಯದ ವಾತಾವರಣದಲ್ಲಿ‌ ಇದ್ದಾರೆ.

10 ಲಕ್ಷ ಕಟ್ಟಿ ಹೋಗಿ ಎನ್ನುವ ವಿವಿಯ ಅಧಿಕಾರಿಗಳು

ಇನ್ನು ಈ ವಿಚಾರವಾಗಿ ಕಿಷ್ಕಿಂದ ವಿಶ್ವವಿದ್ಯಾಲಯದ ಪ್ರವೇಶ ಪಡೆದ ನೂರಾರು ವಿದ್ಯಾರ್ಥಿಗಳು ಈ ಡೋನೇಷನ್, ಶುಲ್ಕ, ಇನ್ನಿತರ ದಂಡಗಳನ್ನು ಪಡೆಯಲು ಹಾಗೂ ಹಗಲು ದರೋಡೆ ಮಾಡುತ್ತಿದ್ದಾರೆ. ವಿವಿ ಬಿಟ್ಟು ಹೋಗಲು ನಿರ್ಧರಿಸಿದ ವಿದ್ಯಾರ್ಥಿಗಳಿಗೆ ಉಳಿದ ವರ್ಷದ 10 ಲಕ್ಷ ಹಣ ಕಟ್ಟಿ ಹೋಗಿ ಎಂದು ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಆರೋಪ ಸಹ ಇದೆ.

ಇನ್ನು ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ನಿಮ್ಮನೆಲ್ಲಾ ಫೇಲ್ ಮಾಡಿದರೇ ವಿಶ್ವವಿದ್ಯಾಲಯ ನಡೆಯೋದ್ ಹೇಗೆ ? ನಮಗೆ ಸಂಬಳ ಕೊಡೋರ್ ಯಾರು ? ಎಂದು ವಿದ್ಯಾರ್ಥಿಗಳಿಗೆ ಉತ್ತರಿಸಿದ್ದು ಸಹ ನಾಚಿಕೆಗೆಡಿನ ಸಂಗತಿಯಾಗಿದೆ. ಇನ್ನು ದುಡ್ಡು ಕೊಟ್ಟರೆ ಮಾತ್ರ ವಿದ್ಯಾರ್ಥಿಗಳು ಪಾಸು ಎನ್ನುವ ಮಾತು ಪೋಷಕರಿಂದ ಕೇಳಿಬಂದಿದೆ.

ಇನ್ನು ಪೋಷಕರು ಈ ಕಿಷ್ಕಿಂದ ವಿಶ್ವವಿದ್ಯಾಲಯ ಹೊಸದಾಗಿ ಆರಂಭಾಗಿದೆ, ಕಡಿಮೆ ಶುಲ್ಕ ಇದೆ ಎಂದು ಪ್ರವೇಶಾತಿ ಪಡೆದಿದ್ದಾರೆ ಆದರೆ ಈ ವಿವಿಯಲ್ಲಿ ನಿರಂತರವಾಗಿ ಪೋಷಕರಿಂದ ಹಣವನ್ನು ಕೀಳುತ್ತಿದ್ದಾರೆ. ಈಗಲಾದರೂ ಪೋಷಕರು ಎಚ್ಚೆತ್ತುಕೊಳ್ಳಬೇಕಿದೆ.

ಇನ್ನು ಈ ವಿಚಾರವಾಗಿ ದೂರವಾಣಿ ಕರೆ ಮಾಡಿ ಮಾತನಾಡಿದ ಕಿಷ್ಕಿಂದ ವಿಶ್ವವಿದ್ಯಾಲಯ ಅಮರೇಶಯ್ಯ ಅವರು ಇಲ್ಲ ನಮ್ಮಲ್ಲಿ ಹಾಗೇನು ನಡೆದಿಲ್ಲ, ಡೊನೆಷನ್ ತೆಗೆದುಕೊಳ್ಳುವುದಿಲ್ಲ, ವಿವಿಗೆ ಕಟ್ಟಿದ ಶುಲ್ಕ ನೇರವಾಗಿ ಪೋಷಕರಿಗೆ ಮೆಸೇಜ್ ಹೋಗುತ್ತದೆ ಎಂದರು.

ಇದರಲ್ಲಿ ಯಾರು ಸುಳ್ಳುರು ಎನ್ನುವ ಅಂಶ ಹೊರಗಡೆ ಬರಲಿ

ಇನ್ನು ಕಿಷ್ಕಿಂದ ಟ್ರಸ್ಟ್ ಮೌನಕ್ಕೆ ಜಾರಿದೆಯೇ ಕಾದು ನೋಡಬೇಕಿದೆ. ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ವಿವಿಯ ಕುಲಪತಿಯಾದ ಶ್ರೀ ರಾಜ್ಯಪಾಲರು ಯಾವ ರೀತಿಯ ಕ್ರಮ ತೆಗೆದುಕೊಳ್ಳುತ್ತಾರೋ..?

ಒಟ್ಟಾರೆಯಾಗಿ ಹೊಸ ವಿಶ್ವವಿದ್ಯಾಲಯ ಆರಂಭವಾಗಿ ಅಭಿವೃದ್ಧಿ ಹೊಂದಬೇಕು ಹಾಗೂ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಅನುಕೂಲಕರವಾಗ ಬೇಕು ಎನ್ನುವುದು ನಮ್ಮ ಆಶಯ.


  • ಆರಂಭದಲ್ಲಿ 1.65 ಲಕ್ಷ ಹಣ ಕಟ್ಟಿದ್ದೆವೆ, ಆದರೆ 60 ಸಾವಿರ ಡೋನೇಷನ್ ನಗದು ಹಣ ತಂದು ಕೊಡು ಅಂತ ಹೇಳ್ತಾರೆ, ಉತ್ತರ ಪತ್ರಿಕೆ ಸರಿಯಾಗಿ ಮೌಲ್ಯ ಮಾಪನ ಮಾಡೊಲ್ಲ, ಫೇಲ್ ಮಾಡ್ತಾರೆ, ಉತ್ತರ ಪತ್ರಿಕೆ ನಕಲು ಪ್ರತಿ ಕೇಳಿದ್ರೆ ಕೊಡೋದಿಲ್ಲ, ಮತ್ತೆ ಪರೀಕ್ಷೆ ಬರೆದಿದ್ದೆವೆ, 85 ರಷ್ಟು ಹಾಜರಾತಿ ಕಡ್ಡಾಯ ಎಂದು ಕಿಷ್ಕಿಂದ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹಾಗೂ ಅವರು ಪೋಷಕರು ಅವರಿಗೆ ಆದ ನೋವನ್ನು ಹೇಳಿಕೊಂಡಿದ್ದಾರೆ.

|ನೊಂದ ವಿದ್ಯಾರ್ಥಿಗಳು, ಪೋಷಕರು, ಬಳ್ಳಾರಿ


ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending