ದಿನದ ಸುದ್ದಿ
ವಿಧಾನಪರಿಷತ್ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು
ಸುದ್ದಿದಿನಡೆಸ್ಕ್:ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ಸಾಧಿಸಿದ್ದಾರೆ.
ಅವರು, 1 ಸಾವಿರದ 600 ಕ್ಕೂ ಅಧಿಕ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಒಂದು ಸಾವಿರದ 957ಮತ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದಾರೆ. ಈ ಕ್ಷೇತ್ರದಲ್ಲಿ ಒಟ್ಟು 5 ಸಾವಿರದ 906 ಮತಗಳು ಚಲಾವಣೆಯಾಗಿದ್ದವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243