Connect with us

ದಿನದ ಸುದ್ದಿ

ರಾಜ್ಯಾದ್ಯಂತ ಕಿತ್ತೂರು ಚೆನ್ನಮ್ಮ ವಿಜಯೋತ್ಸವ; ಹುಟ್ಟೂರು ಕಾಕತಿಯಲ್ಲಿ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಕಿತ್ತೂರ ರಾಣಿ ಚನ್ನಮ್ಮ 200ನೇ ವರ್ಷದ ವಿಜಯೋತ್ಸವ ಐತಿಹಾಸಿಕ ಹೋರಾಟದ ಮಹತ್ವವನ್ನು ಸಾರಲಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

ರಾಣಿ ಚೆನ್ನಮ್ಮ ಜನ್ಮಸ್ಥಳ ಕಾಕತಿಯಲ್ಲಿ ಇಂದು ನಡೆದ ಕಿತ್ತೂರು ಉತ್ಸವ- ಉದ್ಘಾಟಿಸಿ ಮಾತನಾಡಿದ ಅವರು, ಕಿತ್ತೂರು ಹಾಗೂ ಕಾಕತಿ ಅಭಿವೃದ್ದಿಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಬಳಿಕ ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಿದ ವೀರಜ್ಯೋತಿಯನ್ನು ಸಚಿವರು ಕಿತ್ತೂರಿನ ಚನ್ನಮ್ಮನ ವೃತ್ತದಲ್ಲಿ ಬರಮಾಡಿಕೊಂಡು ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು.

ಉತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಆಕರ್ಷಕ ಜಾನಪದ ಕಲಾವಾಹಿನಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು.

ವಿವಿಧ ಇಲಾಖೆಗಳ ಸ್ತಬ್ಥಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಸರಕಾರದ ವಿವಿಧ ಯೋಜನೆಗಳು, ಸೇವಾಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಿದವು.

ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಅವರ ೨೪೬ನೇ ಜನ್ಮದಿನೋತ್ಸವ ಹಾಗೂ ಬ್ರಿಟಿಷರ ವಿರುದ್ಧದ ಸಂಗ್ರಾಮದ 200ನೇ ವಿಜಯೋತ್ಸವದ ಅಂಗವಾಗಿ ಇಂದು ಸಂಸತ್ ಆವರಣದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ಉಪಸ್ಥಿತರಿದ್ದರು.

ಕಿತ್ತೂರು ರಾಣಿ ಚೆನ್ನಮ್ಮ ಗೌರವಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ , ಕೇಂದ್ರ ಸರ್ಕಾರದ ಈ ನಿರ್ಧಾರ ವೀರ ವನಿತೆ ಚೆನ್ನಮ್ಮ ಮತ್ತು ಕನ್ನಡ ನಾಡಿಗೆ ಸಂದ ಗೌರವ ಎಂದು ತಿಳಿಸಿದ್ದಾರೆ.

ವೀರವನಿತೆ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಉತ್ಸವವನ್ನು ರಾಜ್ಯದ ವಿವಿಧೆಡೆ ಆಚರಿಸಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ 200ನೇ ವರ್ಷದ ವಿಜಯೋತ್ಸವ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು.

ಕಿತ್ತೂರು ರಾಣಿ ಚೆನ್ನಮ್ಮ ಭಾರತದ ಸ್ವಾಭಿಮಾನಿ ಮಹಿಳೆಯರ ಪ್ರತೀಕವಾಗಿದ್ದಾರೆ ಎಂದು ಮಾಜಿ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುರೇಶ್ ಇಟ್ನಾಳ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ‍್ಯಕ್ರಮದಲ್ಲಿ, ಚೆನ್ನಮ್ಮ ಭಾವಚಿತ್ರಕ್ಕೆ ಶಾಸಕ ಧೀರಜ್ ಮುನಿರಾಜು ಪುಷ್ಪ ನಮನ ಸಲ್ಲಿಸಿದರು.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಪಾತ್ರ ಕಿತ್ತೂರು ರಾಣಿ ಚೆನ್ನಮ್ಮನವರದಾಗಿದೆ. ಅವರನ್ನು ಸದಾ ಸ್ಮರಿಸುವ ಜೊತೆಗೆ ಅವರ ಶೌರ್ಯ, ಧೈರ್ಯ, ತ್ಯಾಗ ಮತ್ತು ಸಮರ್ಪಣಾ ಮನೋಭಾವದ ಗುಣಗಳನ್ನು ಜೀವನದಲ್ಲಿ ಅಳವಡಿಕೊಳ್ಳುವ ಅಗತ್ಯವಿದೆ ಎಂದು ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಗಜೇಂದ್ರ ತಿಳಿಸಿದ್ದಾರೆ.

ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಶಿಗ್ಗಾಂವಿ ಉಪಚುನಾವಣೆ ಹಿನ್ನಲೆಯಲ್ಲಿ ಸರಳವಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಯಿತು.
ವೀರ ರಾಣಿ ಕಿತ್ತೂರು ಚನ್ನಮ್ಮನ ಐತಿಹಾಸಿಕ 200 ನೇ ವಿಜಯೋತ್ಸವವನ್ನು ಬಳ್ಳಾರಿಯಲ್ಲಿ ಆಚರಿಸಲಾಯ್ತು. ಇದೇ ವೇಳೆ, ನಗರದಲ್ಲಿ ಚನ್ನಮ್ಮನ ಭಾವಚಿತ್ರದ ಮೆರವಣಿಗೆಯು ನಡೆಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending