ದಿನದ ಸುದ್ದಿ
ಕಿತ್ತೂರು ರಾಣಿ ಚೆನ್ನಮ್ಮ ಮತ್ತು ವೀರಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ವೀರಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಟ 5 ವರ್ಷಗಳ ಸೇವೆ ಸಲ್ಲಿಸಿರಬೇಕು. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಂಸ್ಥೆ ಹಾಗೂ ವ್ಯಕ್ತಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಕ್ರಮಗಳ ಮತ್ತು ಇತರೆ ಕ್ಷೇತ್ರಗಳಲ್ಲೂ ವ್ಯಕ್ತಿಗಳು ಕೈಗೊಂಡ ಕಾರ್ಯಕ್ರಮಗಳ ನಿರ್ವಹಣೆಯ ಗುಣಮಟ್ಟವನ್ನು ಆಧಾರವಾಗಿಟ್ಟುಕೊಳ್ಳಲಾಗುತ್ತದೆ.
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಲ್ಲ. ಪ್ರಶಸ್ತಿಗೆ ಬರುವ ಅರ್ಜಿಗಳ ಪರಿಶೀಲನೆಗೆ ಮತ್ತು ಆಯ್ಕೆಗೆ ಸಂಬಂಧಿಸಿದಂತೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಪ್ರಶಸ್ತಿ ಪ್ರದಾನವನ್ನು ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಅಥವಾ ಸರ್ಕಾರವು ನಿಗದಿಪಡಿಸುವ ದಿನಾಂಕ ಹಾಗೂ ಸ್ಥಳದಲ್ಲಿ ಏರ್ಪಡಿಸಲಾಗುವುದು. ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿಗಳು ಪ್ರಶಸ್ತಿಗಳನ್ನು ಖುದ್ದಾಗಿ ಪಡೆಯಬೇಕು ಹಾಗೂ ಸಂಘ, ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಯನ್ನು ಸಂಘದ ಪದಾಧಿಕಾರಿಗಳು ಸ್ವೀಕರಿಸಬಹುದಾಗಿದೆ.
ವೀರಮಹಿಳೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು 18 ರಿಂದ 45 ವಯೋಮಿತಿಯೊಳಗಿರಬೇಕು. ಒಬ್ಬ ಮಹಿಳೆಯು ಆಪತ್ಕಾಲದಲ್ಲಿರುವ ಮತ್ತೊಬ್ಬ ವ್ಯಕ್ತಿಯ ಜೀವ ಕಾಪಾಡುವಲ್ಲಿ ಅಥವಾ ಪ್ರಾಣ ರಕ್ಷಿಸುವಲ್ಲಿ ತನ್ನ ಜೀವದ ಹಂಗನ್ನು ತೊರೆದು, ಸಮಯ ಪ್ರಜ್ಞೆಯಿಂದ ಧೈರ್ಯ, ಸಾಹಸದೊಂದಿಗೆ ಅಪಾಯದಲ್ಲಿರುವ ವ್ಯಕ್ತಿಯ ಜೀವ ಕಾಪಾಡುವಂತಹ ಕಾರ್ಯವನ್ನು ಮಾಡಿದ್ದಲ್ಲಿ ಅಂತಹ ಮಹಿಳೆಯನ್ನು ವೀರಮಹಿಳೆ ಎಂದು ಪರಿಗಣಿಸಬಹುದು.
ವೀರಮಹಿಳೆ ಪ್ರಶಸ್ತಿ ಪಡೆಯುವ ಮಹಿಳೆಯು ವಿಶೇಷ ಶೌರ್ಯ ಹಾಗೂ ಸಾಧನೆ ಮಾಡಿರಬೇಕು. ಈ ಕುರಿತು ದಿನ ಪತ್ರಿಕೆ ಹಾಗೂ ಪೊಲೀಸ್ ಠಾಣೆಯ ವರದಿ ಪ್ರತಿ ಸಲ್ಲಿಸಬೇಕು. ಸಾಧನೆಯು ಸಾರ್ವಜನಿಕರ ಗಮನಕ್ಕೆ ಬಂದಿರಬೇಕು ಹಾಗೂ ಪ್ರಶಸ್ತಿ ಪಡೆಯುವ ಹಿಂದಿನ ವರ್ಷದ ಜನವರಿ 01 ರಿಂದ ಡಿಸೆಂಬರ್ 31 ರೊಳಗೆ ಇರಬೇಕು.
ಪ್ರಶಸ್ತಿಗೆ ಸಂಬಂಧಿಸಿದ ಮಹಿಳೆಯ ತಂದೆ, ತಾಯಿ, ಪೋಷಕರು ಅರ್ಜಿ ಸಲ್ಲಿಸಬಹುದು. ವೀರಮಹಿಳೆ ಪ್ರಶಸ್ತಿಗಾಗಿ ರಾಜ್ಯ ವತಿಯಿಂದ ಒಬ್ಬ ಮಹಿಳೆಗೆ ಮಾತ್ರ ರೂ. 25 ಸಾವಿರಗಳ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಇದನ್ನು ಪ್ರತಿ ವರ್ಷ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ನೀಡಲಾಗುವುದು.
ಪ್ರಶಸ್ತಿಗಾಗಿ ನಿರ್ದಿಷ್ಟ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಬಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಈ ಕಚೇರಿಯಲ್ಲಿ ಪಡೆಯಬಹುದಾಗಿದೆ.
ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಈ ಕಚೇರಿಯಲ್ಲಿ ಅ.11 ರೊಳಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08192-264056 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ2 days ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ2 days ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ5 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ5 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ2 days ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ