ದಿನದ ಸುದ್ದಿ
ಕೆಜೆ, ಡಿಜಿ ಹಳ್ಳಿ ಗಲಭೆ ಅದೊಂದು ಪೂರ್ವ ನಿಯೋಜಿತ ಕೃತ್ಯ : ಸಚಿವ ಭೈರತಿ ಬಸವರಾಜ್
ಸುದ್ದಿದಿನ,ದಾವಣಗೆರೆ: ಕೆಜೆ, ಡಿಜಿ ಹಳ್ಳಿ ಗಲಭೆ ಪೂರ್ವ ನಿಯೋಜಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಿಡಿಗೇಡಿಗಳು ಯಾರೇ ಅಗಲಿ ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಸರ್ಕಾರ ಬದ್ದವಾಗಿದೆ.
ದೇಶದ್ರೋಹಿಗಳು ಯಾರೇ ಆಗಲಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಿಎಂ, ಗೃಹ ಸಚಿವರು ಸೇರಿದಂತೆ ಸಚಿವರು ಕಾರ್ಯಪ್ರವೃತ್ತರಾಗಿದ್ದಾರೆ. ಈ ಕೃತ್ಯ ಪೂರ್ವ ನಿಯೋಜಿತವಾಗಿದ್ದು, ಫೋನ್, ವಾಟ್ಸಾಪ್ ಮೂಲಕ ಸಂಚು ನಡೆಸಲಾಗಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243