ದಿನದ ಸುದ್ದಿ
ಕೊಡಗು ಪ್ರವಾಹ | ಪರಿಹಾರ ಕೇಂದ್ರದಲ್ಲಿ 2,363 ಸಂತ್ರಸ್ತರು ; ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ ಓದಿ

ಸುದ್ದಿದಿನ,ಮಡಿಕೇರಿ : ಜಿಲ್ಲೆಯಾದ್ಯಾಂತ ಭಾರೀ ಮಳೆಯಿಂದಾಗಿ ಹಲವು ಭಾಗಗಳಲ್ಲಿ ತೀವ್ರ ಭೂಕುಸಿತ ಉಂಟಾಗಿತ್ತು, ಭೂಕುಸಿತ ಹಾಗೂ ಪ್ರವಾಹದಿಂದಾಗಿ ಹಲವು ಮಂದಿ ಸಂತ್ರಸ್ಥರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಪುನರ್ವಸತಿ ಕಲ್ಪಿಸಲಾಗುತ್ತಿದೆ.
ಸಂತ್ರಸ್ತರಿಗೆ ವಿತರಿಸಲು ರಾಜ್ಯ, ಜಿಲ್ಲೆಯ ವಿವಿಧೆಡೆಗಳಿಂದ, ಜನಪ್ರತಿನಿಧಿಗಳಿಂದ, ಸಾರ್ವಜನಿಕರಿಂದ, ಸಂಘ ಸಂಸ್ಥೆಗಳಿಂದ ಸ್ವೀಕೃತವಾಗುತ್ತಿರುವ ಪರಿಹಾರ ಸಾಮಾಗ್ರಿಗಳನ್ನು ಜಿಲ್ಲೆಯ ದಾಸ್ತಾನು ಕೇಂದ್ರಗಳಾದ ನಗರದ ಜಿಲ್ಲಾಡಳಿತ ಭವನ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಕಟ್ಟಡ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಗೋದಾಮು, ಕುಶಾಲನಗರ ಮತ್ತು ಪೊನ್ನಂಪೇಟೆಯ ಹಳೇ ನ್ಯಾಯಾಲಯ ಕಟ್ಟಡ ಕೇಂದ್ರಗಳಲ್ಲಿ ದಾಸ್ತಾನು ಮಾಡಲು ವ್ಯವಸ್ಥೆ ಮಾಡಲಾಗಿದೆ.
ಜಿಲ್ಲೆಗೆ ಆಹಾರ ಸಾಮಾಗ್ರಿಗಳು, ವೈದ್ಯಕೀಯ ಸಾಮಾಗ್ರಿಗಳು, ಕುಡಿಯುವ ನೀರು ಹಾಗೂ ಹಾಗೂ ಇತರೆ ಅಗತ್ಯ ಪರಿಹಾರ ಸಾಮಾಗ್ರಿಗಳು 30 ಭಾರಿ ಹಾಗೂ ಲಘು ವಾಹನಗಳಲ್ಲಿ ಆಗಸ್ಟ್ 29 ರಂದು ಜಿಲ್ಲೆಗೆ ಬಂದಿರುತ್ತದೆ. ಹಾಗೂ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ನೆರೆ ಸಂತ್ರಸ್ಥರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯಾಧಿಕಾರಿಗಳ, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳ ಮುಖಾಂತರ ಹಂಚಿಕೆ ಮಾಡಲು 34 ಲಘು ವಾಹನಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.
ಪ್ರಮುಖ ಅವಶ್ಯವಿರುವ ಸಾಮಾಗ್ರಿಗಳು: 15540 ಕೆ.ಜಿ. ಅಕ್ಕಿ, 1204 ಕೆ.ಜಿ. ಸಕ್ಕರೆ, 1152 ಲೀಟರ್ ಎಣ್ಣೆ, 1173 ಕೆ.ಜಿ. ತೊಗರಿ ಬೆಳೆ, 397 ಬಾಕ್ಸ್ ಕುಡಿಯುವ ನೀರಿನ ಬಾಟಲಿ, 27 ಹಾಲಿನ ಬಾಕ್ಸ್, 262 ಬಾಕ್ಸ್ ಬಿಸ್ಕೆಟ್, 1,112 ಹೊದಿಕೆಗಳು, 175 ಸ್ವೆಟರ್, 770 ಉಡುಗೆ ವಸ್ತುಗಳನ್ನು ಜಿಲ್ಲಾಡಳಿತದ ವತಿಯಂದ ಸಂತ್ರಸ್ತರಿಗೆ ಆಗಸ್ಟ್ 29 ರಂದು ವಿತರಣೆ ಮಾಡಲಾಗಿದೆ.
ಪರಿಹಾರ ಕೇಂದ್ರಗಳಲ್ಲಿರುವ ಸಂತ್ರಸ್ತರ ವಿವರ: ಮಡಿಕೇರಿ ತಾಲ್ಲೂಕಿನ 17 ಪರಿಹಾರ ಕೇಂದ್ರಗಳಲ್ಲಿ 590 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 800 ಗಂಡು, ಮತ್ತು 832 ಹೆಣ್ಣು ಸೇರಿದಂತೆ 1632 ಜನ ಸಂತ್ರಸ್ತರಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ 05 ಪರಿಹಾರ ಕೇಂದ್ರಗಳಲ್ಲಿ 237 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 348 ಗಂಡು ಮತ್ತು 357 ಹೆಣ್ಣು ಸೇರಿದಂತೆ ಒಟ್ಟು 705 ಜನ ಸಂತ್ರಸ್ತರಿದ್ದಾರೆ.
ವಿರಾಜಪೇಟೆ ತಾಲ್ಲೂಕಿನ 01 ಪರಿಹಾರ ಕೇಂದ್ರಗಳಲ್ಲಿ 06 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 12 ಗಂಡು ಮತ್ತು 14 ಹೆಣ್ಣು ಸೇರಿದಂತೆ ಒಟ್ಟು 26 ಜನ ಸಂತ್ರಸ್ತರಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿರುವ 23 ಪರಿಹಾರ ಕೇಂದ್ರಗಳಲ್ಲಿ ಒಟ್ಟು 833 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 1,160 ಗಂಡು ಮತ್ತು 1203 ಹೆಣ್ಣು ಸೇರಿದಂತೆ ಒಟ್ಟು 2,363 ಜನ ಸಂತ್ರಸ್ತರಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.

ದಿನದ ಸುದ್ದಿ
ಕವಿತೆ | ಮತ್ತಿನ ಕುಣಿಕೆ

- ಗುರು ಸುಳ್ಯ
ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ
ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ
ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…
ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ
ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ
ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ6 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ5 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ4 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ6 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ4 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ4 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ