ದಿನದ ಸುದ್ದಿ
ಕೊಡಗು ಪ್ರವಾಹ : ನಾಳೆ ಸಂತ್ರಸ್ತರ ಜೊತೆ ಸಂವಾದ ನಡೆಸಲಿದ್ದಾರೆ ಎಚ್.ಡಿ.ಕೆ
ಸುದ್ದಿದಿನ,ಮಡಿಕೇರಿ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಕ್ಟೋಬರ್, 17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅಂದು ಬೆಳಗ್ಗೆ ನಗರದ ಗಾಂಧಿ ಮೈದಾನದಲ್ಲಿ ಸಂತ್ರಸ್ತರ ಜೊತೆ ಸಂವಾದ, ನಂತರ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಆದ್ದರಿಂದ ಪುನರ್ವಸತಿ ಸಂಬಂಧ ಇದುವರೆಗೆ ಕೈಗೊಳ್ಳಲಾಗಿರುವ ಕಾರ್ಯಗಳು ಹಾಗೂ ಕಾಮಗಾರಿಗಳ ಬಗ್ಗೆ ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬು ಕುಮಾರ್ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪುನರ್‍ವಸತಿ ಸಂಬಂಧಿಸಿದಂತೆ ಈಗಾಗಲೇ ನಿವೇಶನದ ಭೂಮಿ ಸಮತಟ್ಟು ಮಾಡಿ, ಬಡಾವಣೆ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಗೆಯೇ ಅತಿವೃಷ್ಟಯಿಂದಾಗಿ ರಸ್ತೆ, ಶಾಲಾ ಕಟ್ಟಡಗಳು, ಅಂಗನವಾಡಿ ಕಟ್ಟಡಗಳ ಹಾನಿಯಾಗಿದ್ದು, ಈ ಕಾಮಗಾರಿಗಳ ಪ್ರಗತಿ, ಮತ್ತಿತರ ಬಗ್ಗೆ ನಿಖರ ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚನೆ ನೀಡಿದರು.
ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು, ನಿರ್ದೇಶನಗಳು ಕ್ಷೇತ್ರದಲ್ಲಿ ಕಾರ್ಯರೂಪಕ್ಕೆ ಬರಬೇಕು. ಪ್ರಕೃತಿ ವಿಕೋಪದ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿರುವ ಕಾರ್ಯಗಳ ಬಗ್ಗೆ ರಾಜಧಾನಿಯವರೆಗೂ ತಿಳಿಯುವಂತಾಗಬೇಕು. ಆ ನಿಟ್ಟಿನಲ್ಲಿ ವೆಬ್‍ಸೈಟ್, ಟ್ವೀಟರ್, ಪೇಸ್‍ಬುಕ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಡೇಟ್ ಮಾಹಿತಿ ಒದಗಿಸುವಂತೆ ಅನ್ಬುಕುಮಾರ್ ಅವರು ನಿರ್ದೇಶನ ನೀಡಿದರು.
ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ರಸ್ತೆಗಳು ಗುಂಡಿ ಮುಚ್ಚುವುದು, ಟಾರ್ ಹಾಕುವುದು ಮತ್ತಿತರ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ವೈಜ್ಞಾನಿಕವಾಗಿ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಹೇಳಿದರು.
ಅತಿವೃಷ್ಟಿಯಿಂದ ಉಂಟಾದ ಬೆಳೆ ನಷ್ಟ ಸಂಬಂಧ ಈಗಾಗಲೇ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಕೂಡಲೇ ಪರಿಹಾರ ವಿತರಣೆ ಮಾಡುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಮಾತನಾಡಿ ಪುನರ್ವಸತಿಯನ್ನು ತ್ವರಿತವಾಗಿ ಕಲ್ಪಿಸಬೇಕು. ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಸೆಸ್ಕ್ ಹೀಗೆ ಆಯಾಯ ಇಲಾಖೆಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡಿದ್ದು, ಪ್ರಕೃತಿ ವಿಕೋಪದ ಕಾಮಗಾರಿಗಳನ್ನು ಆದ್ಯತೆ ಮೇಲೆ ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮುಖ್ಯಮಂತ್ರಿಯವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಶಿಷ್ಟಾಚಾರ ಪಾಲನೆ ಮಾಡುವುದು, ಗಾಂಧೀ ಮೈದಾನದಲ್ಲಿ ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ಸಂವಾದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವುದು ಮತ್ತಿತರ ಬಗ್ಗೆ ಸೂಚನೆ ನೀಡಲಾಯಿತು. ಹೆಚ್ಚುವರಿ ವಿಶೇಷ ಜಿಲ್ಲಾಧಿಕಾರಿ ಜಗದೀಶ್ ಅವರು ನಿರಾಶ್ರಿತರಿಗಾಗಿ ಈಗಾಗಲೇ ಜಾಗ ಗುರುತಿಸಿ ಭೂಮಿ ಸಮತಟ್ಟು ಮಾಡಿ ಮನೆ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ಮಾತನಾಡಿ ಮುಖ್ಯಮಂತ್ರಿ ಆಗಮನ ಹಿನ್ನೆಲೆ ಸೂಕ್ತ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ ಎಂದರು.
ಜಿ.ಪಂ.ಸಿಇಒ ಲಕ್ಷ್ಮೀ ಪ್ರಿಯ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ನಾನಾ ಇಲಾಖೆ ಅಧಿಕಾರಿಗಳು ಹಲವು ಮಾಹಿತಿ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ‌್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್‌ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್‌ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.
ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


