ದಿನದ ಸುದ್ದಿ

ಕೊಡಗು ಪ್ರವಾಹ : ಹೆಚ್ಚಿನ ಹಣ ಬಿಡುಗಡೆಗೆ ಕೇಂದ್ರಕ್ಕೆ ಮನವಿ

Published

on

ಸುದ್ದಿದಿನ,ಬೆಂಗಳೂರು : ಕೇಂದ್ರ ಗೃಹ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಮಂಗಳವಾರ ಬೆಂಗಳೂರಿನ ವಿಧಾನಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಇತರರು ಭೇಟಿ ಮಾಡಿ ಕೊಡಗು ಜಿಲ್ಲೆಯಲ್ಲಿ ಕಳೆದ ತಿಂಗಳು ಪ್ರಕೃತಿ ವಿಕೋಪದಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, ಕೂಡಲೇ ಹೆಚ್ಚಿನ ಹಣ ಬಿಡುಗಡೆ ಮಾಡುವಂತೆ ಕೋರಿದ್ದಾರೆ.

ಈಗಾಗಲೇ ಕೇಂದ್ರ ತಂಡವು ಪ್ರಕೃತಿ ವಿಕೋಪ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಕ್ಷಣವೇ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ಮನವಿ ಮಾಡಿದ್ದಾರೆ.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಗೃಹ ಸಚಿವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿ ಹಣ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version