ದಿನದ ಸುದ್ದಿ

ಕೊಡಗು ಪ್ರವಾಹ : ಮನೆ ಹಾನಿ ವಿವರದ ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಅವಕಾಶ

Published

on

ಸುದ್ದಿದಿನ,ಮಡಿಕೇರಿ: ಜಿಲ್ಲೆಯಲ್ಲಿ ಈ ವರ್ಷ ಬಿದ್ದ ಭಾರೀ ಮಳೆಯಿಂದ ಅತಿವೃಷ್ಟಿ ಹಾಗೂ ಭೂಕುಸಿತ ಉಂಟಾಗಿದ್ದು, ಆದ ಕಾರಣ ತೀವ್ರ ಪ್ರಮಾಣದಲ್ಲಿ ಮನೆಗಳು ಹಾನಿಯಾಗಿರುತ್ತದೆ. ಅದರಂತೆ ಹಾನಿಯಾಗಿರುವ ಪ್ರದೇಶಗಳ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳು, ಕಂದಾಯ ಪರಿವೀಕ್ಷಕರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಂಟಿ ತಪಾಸಣೆ ನಡೆಸಿ ವಾಸಕ್ಕೆ ಯೋಗ್ಯವಿಲ್ಲದ ಹಾನಿಯಾದ ಮನೆಗಳನ್ನು ಗುರುತಿಸಿದ್ದು, ಈ ಮನೆ ಹಾನಿ ವಿವರದ ಪಟ್ಟಿಯನ್ನು ಸೆಪ್ಟೆಂಬರ್, 29 ರಂದು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ, ನಗರಸಭೆ, ಮಡಿಕೇರಿ ಹಾಗೂ ಪಟ್ಟಣ ಪಂಚಾಯಿತಿ, ಕುಶಾಲನಗರ ಕಚೇರಿಗಳಲ್ಲಿ ಹಾಗೂ ಕೊಡಗು ಜಿಲ್ಲೆಯ ಅಧಿಕೃತ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುವುದು‌ ಎಂದು ಜಲ್ಲಾಧಿಕಾರಿ ತಿಳಿಸಿದರು.

ಆದ್ದರಿಂದ ಸಾರ್ವಜನಿಕರು, ಫಲಾನುಭವಿಗಳು ತಮಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ, ನಗರಸಭೆ, ಮಡಿಕೇರಿ ಹಾಗೂ ಪಟ್ಟಣ ಪಂಚಾಯಿತಿ, ಕುಶಾಲನಗರ ಕಚೇರಿಗಳಲ್ಲಿ ಪ್ರಕಟಿಸಲಾದ ಮನೆ ಹಾನಿ ವಿವರದ ಪಟ್ಟಿಯನ್ನು ಗಮನಿಸುವಂತೆ ಹಾಗೂ ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಅಕ್ಟೋಬರ್, 3 ರೊಳಗೆ ತಮ್ಮ ಆಕ್ಷೇಪಣೆಗಳನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ, ನಗರಸಭೆ ಮಡಿಕೇರಿ ಹಾಗೂ ಪಟ್ಟಣ ಪಂಚಾಯಿತಿ ಕುಶಾಲನಗರ ಕಚೇರಿಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version