Connect with us

ದಿನದ ಸುದ್ದಿ

ಕೊಡಗು ಪ್ರವಾಹ | ಮಂಡ್ಯ ಜಿಲ್ಲಾಡಳಿತದ ನೆರವು

Published

on

ಸುದ್ದಿದಿನ, ಮಂಡ್ಯ| ಕೊಡಗು ಜಿಲ್ಲೆಯ ನೆರೆ ಸಂತ್ರಸ್ತರಿಗೆ ನೆರವು ನೀಡಲು ಮಂಡ್ಯ ಜಿಲ್ಲಾಡಳಿತ ಮುಂದಾಗಿದ್ದು, ಮಂಡ್ಯ ನಗರದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಂದ ನೆರವು ಸ್ವೀಕರಿಸಲು ಸಂಗ್ರಹ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಕೊಡಗು ಜಿಲ್ಲೆ ಅತಿವೃಷ್ಟಿಗೆ ಒಳಗಾಗಿರುವುದರಿಂದ ಸ್ವ-ಇಚ್ಚೆಯಿಂದ, ಸಂಘ ಸಂಸ್ಥೆಗಳಿಂದ, ಸಾರ್ವಜನಿಕರಿಂದ ನೆರೆ ಸಂತ್ರಸ್ಥರಿಗೆ ನೀಡುವ ದೇಣಿಗೆ, ಆಹಾರ ಸಾಮಾಗ್ರಿ, ಉಪಯೋಗಿಸದ ವಸ್ತ್ರ ಇತ್ಯಾದಿಗಳನ್ನು ಸ್ವೀಕರಿಸಲು ಜಿಲ್ಲಾಧಿಕಾರಿಗಳ ಕಚೇರಿಯ ನಗರಾಭಿವೃದ್ಧಿ ಕೋಶ ಮಂಡ್ಯದಲ್ಲಿ ಕೌಂಟರ್ ತೆರೆಯಲಾಗಿದೆ.

ಮಂಡ್ಯ ನಗರಾಭಿವೃದ್ಧಿ ಕೋಶ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಕುಬೇರಪ್ಪ ಅವರಿಗೆ ನೆರವಿಗೆ ಬರುವ ವಸ್ತುಗಳ ಸಂಗ್ರಹದ ಜವಾಬ್ದಾರಿಯನ್ನು ನೀಡಲಾಗಿದ್ದು, ನೆರವು ನೀಡಲು ಇಚ್ಚಿಸುವ ದಾನಿಗಳು ದೂರವಾಣಿ ಸಂಖ್ಯೆ 08232-231111 ಅಥವಾ ಮೊಬೈಲ್ ಸಂಖ್ಯೆ 8073995839 ಕರೆ ಮಾಡಿ ನೆರವನ್ನು ನೀಡಬಹುದು. ಧನ ಸಹಾಯ ಮಾಡಲು ಮುಂದಾಗುವ ಸಾರ್ವಜನಿಕರಿಗೆ “ಕೊಡಗು ಫ್ಲ್ಲಡ್ ರಿಲೀಫ್ ಫಂಡ್- ಮಂಡ್ಯ”( KODAGU FLOOD RELIEF FUND-MANDYA) ಹೆಸರಿಗೆ ವಿಜಯ ಬ್ಯಾಂಕ್‍ನಲ್ಲಿ ಪ್ರತ್ಯೇಕ ಖಾತೆಯನ್ನು ತೆರೆಯಲಾಗಿದ್ದು, ಖಾತೆ ಸಂಖ್ಯೆ 114101101000054 ಗೆ (IFSC CODE: VIJB0001141) ಹಣವನ್ನು ಜಮೆ ಮಾಡಬಹುದು.

ಈಗಾಗಲೇ ಮಂಡ್ಯ ಜಿಲ್ಲೆಯ ಜನತೆ ಹಾಗೂ ಸಂಘ ಸಂಸ್ಥೆಗಳು ಸಾಕಷ್ಟು ಸಂಖ್ಯೆಯಲ್ಲಿ ಸಹಾಯ ಹಸ್ತ ನೀಡಿಲು ಮುಂದಾಗಿರುವುದನ್ನು ಮಂಡ್ಯ ಜಿಲ್ಲಾಡಳಿತ ಶ್ಲಾಘಿಸಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ನೆರವಿಗೆ ಜನರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಕವಿತೆ | ಮತ್ತಿನ ಕುಣಿಕೆ

Published

on

  • ಗುರು ಸುಳ್ಯ

ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ

ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ

ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…

ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ

ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ

ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)

ಕವಿ : ಗುರು ಸುಳ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

Published

on

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು.

ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

Published

on

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ27 minutes ago

ಕವಿತೆ | ಮತ್ತಿನ ಕುಣಿಕೆ

ಗುರು ಸುಳ್ಯ ನಿದೆರೆಗೆ ದೂಡದ ಮದಿರೆಯ ಅನುಭವ ಸದಾ ಸಂಕಟಗಳ ಹೆರುವ ಮತ್ತಿನ ಕುಣಿಕೆ ನನ್ನ ಮಡಿಲ ಮೇಲೆ ನನ್ನದೇ ಒಡಲು ಮಲಗಿರಲು ಮಲಗಲು ಹಂಬಲಿಸುವ ಮಗುವಿನ...

ದಿನದ ಸುದ್ದಿ1 day ago

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು. ಶಾಸಕ ನಿವಾಸದಲ್ಲಿ ಶನಿವಾರ...

ದಿನದ ಸುದ್ದಿ2 days ago

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು....

ದಿನದ ಸುದ್ದಿ3 days ago

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ. ಅರ್ಹರನ್ನು...

ದಿನದ ಸುದ್ದಿ3 days ago

ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ...

ದಿನದ ಸುದ್ದಿ3 days ago

ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

ಸುದ್ದಿದಿನ,ದಾವಣಗೆರೆ: ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ ಸತತ ನಾಲ್ಕೈದು ವರ್ಷಗಳಿಂದ ಟ್ಯಾಂಕರ್ ಗಳ ಮೂಲಕ ದಿನಕ್ಕೆ...

ದಿನದ ಸುದ್ದಿ4 days ago

ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ :‌ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಬೆಂಗಳೂರು:ಗ್ಯಾರಂಟಿ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ; ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಪಕ್ಷ ನಾಯಕರ ಆರೋಪಕ್ಕೆ, ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ...

ದಿನದ ಸುದ್ದಿ4 days ago

ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್‍ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ...

ದಿನದ ಸುದ್ದಿ4 days ago

ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ

ಸುದ್ದಿದಿನ,ದಾವಣಗೆರೆ:ಹರಿಹರ ತಾಲ್ಲೂಕು ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ನೀಡಲು ಹರಾಜು ಕರೆಯಲಾಗಿದ್ದು, ಕಾರಣಾಂತರಗಳಿಂದ ಹರಾಜು ದಿನಾಂಕವನ್ನು ಮಾ.20 ರ ಬೆಳಿಗ್ಗೆ 11.00 ಗಂಟೆಗೆ...

ದಿನದ ಸುದ್ದಿ4 days ago

ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಚನ್ನಗಿರಿ ನ್ಯಾಯಾಯದಲ್ಲಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶರಾಗಿರುವ ಕು.ಶಮಾ...

Trending