Connect with us

ಕ್ರೀಡೆ

ನಾಟಿಂಗ್ ಹ್ಯಾಮ್ ಟೆಸ್ಟ್‌ ಗೆಲುವನ್ನು ‘ಕೇರಳ ಸಂತ್ರಸ್ತರಿಗೆ ‘ಅರ್ಪಿಸಿದ ಕೊಹ್ಲಿ

Published

on

ಸುದ್ದಿದಿನ, ನಾಟಿಂಗ್ ಹ್ಯಾಮ್: ಇಲ್ಲಿ ಬುಧವಾರ ಮುಕ್ತಾಯವಾದ ಇಂಗ್ಲೆಂಡ್ ವಿರುದ್ಧದ 3 ನೇ ಟೆಸ್ಟ್‌ ಪಂದ್ಯದಲ್ಲಿ 203 ರನ್ ಗಳ ಅಂತರದಲ್ಲಿ ಭಾರತ ಜಯಭೇರಿ ಬಾರಿಸಿತು. ಈ ಗೆಲುವನ್ನು ನಾಯಕ ವಿರಾಟ್ ಕೊಹ್ಲಿ, ಕೇರಳದ ನೆರೆ ಸಂತ್ರಸ್ತರಿಗೆ ಅರ್ಪಿಸಿದ್ದಾರೆ.

5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ 1-2 ರಿಂದ ಹಿನ್ನಡೆ ಅನುಭವಿಸಿದೆ. ಆದರೂ ಸರಣಿ ಜೀವಂತವಾಗಿದೆ. ಈ ಪಂದ್ಯ ಭಾರತದ ಪಾಲಿಗೆ ಮಾಡು ಇಲ್ಲವೇ ಮಡಿ ಅಂತಾಗಿತ್ತು. ಇಂಗ್ಲೆಂಡ್ ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದಿತ್ತು. ಒಂದೊಮ್ಮೆ ಈ ಪಂದ್ಯ ಇಂಗ್ಲೆಂಡ್ ಪಾಲಾಗಿದ್ದರೆ, ಭಾರತದ ಸರಣಿ ಗೆಲುವಿನ ಆಸೆ ಮರೀಚಿಕೆ ಯಾಗುತ್ತಿತ್ತು. 3 ನೇ ಪಂದ್ಯವನ್ನು ಜಯಿಸುವ ಮೂಲಕ ಸರಣಿಯನ್ನು ಜೀವಂತವಾಗಿರಿಸಿದೆ. ಇನ್ನೂ 2 ಟೆಸ್ಟ್‌ ಪಂದ್ಯಗಳಲ್ಲಿ ಭಾರತ ಇಂತಹದ್ದೇ ಪ್ರದರ್ಶನ ತೋರಿದ್ದೆ ಆದಲ್ಲಿ ಕೊಹ್ಲಿ ಪಡೆಗೆ ಸರಣಿ ಕಟ್ಟಿಟ್ಟ ಬುತ್ತಿ ಎನ್ನುವಂತಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

2024ರ ಕ್ರೀಡಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ 2025ರ ಕ್ರೀಡಾ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಕ್ರೀಡೆಗಳಲ್ಲಿನ ಶ್ರೇಷ್ಠತೆಯನ್ನು ಗುರುತಿಸಲು ಮತ್ತು ಗೌರವಿಸಲು ಪ್ರತಿ ವರ್ಷ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಕ್ರೀಡಾ ಕ್ಷೇತ್ರದಲ್ಲಿ ಅದ್ಭುತ ಮತ್ತು ಅತ್ಯುತ್ತಮ ಪ್ರದರ್ಶನಕ್ಕಾಗಿ ನೀಡಲಾಗುತ್ತದೆ. ಕ್ರೀಡೆಯಲ್ಲಿ ಜೀವಮಾನದ ಕೊಡುಗೆಗಾಗಿ ಅರ್ಜುನ ಪ್ರಶಸ್ತಿಯನ್ನು ಪರಿಚಯಿಸಲಾಗಿದೆ.

ಪ್ರತಿಷ್ಠಿತ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರನ್ನು ತರಬೇತಿ ನೀಡಿದ ತರಬೇತುದಾರರಿಗೆ ದ್ರೋಣಾಚಾರ್ಯ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಗಾಗಿ ಅರ್ಹ ಕ್ರೀಡಾಪಟುಗಳು, ತರಬೇತುದಾರರು ಮತ್ತು ಸಂಘಗಳು ಅರ್ಜಿಗಳನ್ನು ಆನ್‌ಲೈನ್ ಪೋರ್ಟಲ್ https://dbtyas-sports.gov.in/ ನಲ್ಲಿ ನವೆಂಬರ್ 14 ರೊಳಗೆ ಸಲ್ಲಿಸಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ದಾವಣಗೆರೆ | ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ; ರಾಜ್ಯ ಮಟ್ಟಕ್ಕೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:2024 -25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಮಹಿಳಾ ಸೇವಾ ಸಮಾಜದ ಟಿ.ಎಂ. ಚಿನ್ನಮ್ಮ ಮಹೇಶ್ವರಯ್ಯ ಮೆಮೋರಿಯಲ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂರ್ಣಿಮ ಎಂ ರವರು ಜಿಲ್ಲಾಮಟ್ಟದ ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ರಾಜನಹಳ್ಳಿ ಸೀತಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜು ದಾವಣಗೆರೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿತ್ತು.

ದೈಹಿಕ ಶಿಕ್ಷಕರಾದ ಎಂ ಎನ್ ಮರಳ ಸಿದ್ದಪ್ಪರವರ ಮಾರ್ಗದರ್ಶನದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

Olympic Games Paris 2024 | ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ; ಇಲ್ಲಿದೆ ಇಂದಿನ ಆಟಗಳ ಸಂಪೂರ್ಣ ಮಾಹಿತಿ

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನವಾದ ಇಂದು ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ಸ್ ಪಂದ್ಯದಲ್ಲಿ ಮನು ಭಾಕರ್ ಕಂಚು ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ.

ಈ ಮೂಲಕ ಅವರು, ಒಲಿಂಪಿಕ್ಸ್ನ ಮಹಿಳೆಯರ ಶೂಟಿಂಗ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಫೈನಲ್ ಪಂದ್ಯದಲ್ಲಿ ಹೆಚ್ಚಿನ ಕಾಲ 2ನೇ ಸ್ಥಾನದಲ್ಲಿದ್ದು, ಬೆಳ್ಳಿ ಗೆಲ್ಲುವ ಸನಿಹದಲ್ಲಿದ್ದ ಅವರನ್ನು ಕೊನೆ ಕ್ಷಣದಲ್ಲಿ ಕೊರಿಯಾದ ಕಿಮ್‌ಯೆಜಿ ಹಿಂದಿಕ್ಕಿದರು. ಫೈನಲ್ಸ್ನಲ್ಲಿ ಮನುಬಾಕರ್ 221.7 ಅಂಕಗಳ ಮೂಲಕ ಕಂಚು ಪದಕ ಗೆದ್ದರೆ ದಕ್ಷಿಣ ಕೊರಿಯಾದ ಕಿಮ್‌ಯೆಜಿ 241.3 ಅಂಕಗಳ ಮೂಲಕ ಬೆಳ್ಳಿ ಹಾಗೂ ಅದೇ ರಾಷ್ಟ್ರದ ಒಹ್ ಯೆ ಜಿನ್, ದಾಖಲೆಯ 243.2 ಅಂಕಗಳ ಮೂಲಕ ಸ್ವರ್ಣ ಪದಕ ತಮ್ಮದಾಗಿಸಿಕೊಂಡರು. ಮನು ಭಾಕರ್ ಅವರ ಈ ಸಾಧನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ. ಅವರ ಈ ಸಾಧನೆಯ ಕುರಿತು ಭಾರತಕ್ಕೆ ಹೆಮ್ಮೆಯಿದ್ದು, ಅವರು ಅನೇಕ ಕ್ರೀಡಾಪಟುಗಳು ಹಾಗೂ ವಿಶೇಷವಾಗಿ ಮಹಿಳೆಯರಿಗೆ ಸ್ಫೂರ್ತಿದಾಯಕರಾಗಿದ್ದಾರೆ ಎಂದು ರಾಷ್ಟ್ರಪತಿಯವರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮನು ಭಾಕರ್ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದು, ಭಾರತಕ್ಕೆ ಇದು ಐತಿಹಾಸಿಕ ಪದಕವಾಗಿದೆ. ಮಹಿಳಾ ಶೂಟಿಂಗ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂಡುಕೊಟ್ಟಿರುವುದರಿAದ ಇದೊಂದು ಅಸಾಮಾನ್ಯ ಹಾಗೂ ವಿಶೇಷ ಸಾಧನೆಯಾಗಿದೆ ಎಂದು ತಿಳಿಸಿದ್ದಾರೆ.

ಇಂದು ನಡೆದ ಪುರುಷರ 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತದ ಅರ್ಜುನ್ ಬಬೂಟ 630.1 ಅಂಕಗಳೊAದಿಗೆ 7ನೇ ಸ್ಥಾನಗಳಿಸಿ ಫೈನಲ್ ಪ್ರವೇಶಿಸಿದ್ದಾರೆ. ಹಾಗೆಯೇ ಮಹಿಳೆಯರ 10 ಮೀಟರ್ ಏರ್ ರೈಫಲ್‌ನಲ್ಲಿ ರಮಿತಾ ಜಿಂದಾಲ್ ಫೈನಲ್ ಪ್ರವೇಶಿಸಿದ್ದಾರೆ. ರಮಿತಾ ಜಿಂದಾಲ್, 631.5 ಅಂಕಗಳೊAದಿಗೆ 5ನೇ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದರು. ಮತ್ತೊರ್ವ ಮಹಿಳಾ ಶೂಟರ್ ಎಲವೆನಿಲ್ ವಲರಿವನ್ 630.7 ಅಂಕಗಳೊAದಿಗೆ 10ನೇ ಸ್ಥಾನ ಪಡೆದು ಫೈನಲ್ ಪ್ರವೇಶಿಸಲು ವಿಫಲರಾದರು.

ಇಂದು ನಡೆದ ಮಹಿಳೆಯರ ಬ್ಯಾಡ್ಮಿಂಟನ್‌ನ ಸಿಂಗಲ್ಸ್ ವಿಭಾಗದ ತಮ್ಮ ಮೊದಲ ಪಂದ್ಯದಲ್ಲಿ 2 ಒಲಿಂಪಿಕ್ ಪದಕ ವಿಜೇತೆ ಭಾರತದ ಪಿ.ವಿ. ಸಿಂಧೂ, ಮಾಲ್ಡೀವ್ಸ್ನ ಫಾತಿಮತ್ ನಬಾಹ ಅಬ್ದುಲ್ ರಜಾಕ್ ಅವರನ್ನು 21-9, 21-6 ಅಂಕಗಳ ಅಂತರದಲ್ಲಿ ಮಣಿಸಿ ಶುಭಾರಂಭ ಕಂಡಿದ್ದಾರೆ. ಟೆಬಲ್ ಟೆನಿಸ್‌ನ 64ರ ಸುತ್ತಿನಲ್ಲಿ ಭಾರತದ ಶ್ರೀಜಾ ಅಕುಲಾ, ಸ್ವೀಡನ್‌ನ ಕ್ರಿಸ್ಟಿನಾ ಕಾಲ್ಬರ್ಗ್ ವಿರುದ್ಧ ಗೆಲುವು ಸಾಧಿಸಿ ಮುಂದಿನ ಹಂತಕ್ಕೆ ಅರ್ಹತೆ ಪಡೆದರು.

ಮಹಿಳಾ ಬಿಲ್ಲುಗಾರಿಕೆಯಲ್ಲಿ ದೀಪಿಕಾ ಕುಮಾರಿ, ಅಂಕಿತಾ ಭಕತ್ ಹಾಗೂ ಭಜನ್ ಕೌರ್ ಈ ಮೂವರನ್ನೊಳಗೊಂಡ ಭಾರತೀಯ ತಂಡ ಕ್ವಾಟರ್ ಫೈನಲ್‌ನಲ್ಲಿ ನೆದರ್‌ಲ್ಯಾಂಡ್ ತಂಡದ ವಿರುದ್ಧ 0-6 ಅಂಕಗಳಿಂದ ಪರಾಭವಗೊಂಡಿದೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಎಚ್.ಎಸ್. ಪ್ರಣೋಯ್, ಜರ್ಮನಿಯ ಫೇಬಿಯನ್ ರೋತ್ ವಿರುದ್ಧ ಹೋರಾಟ ನಡೆಸಲಿದ್ದಾರೆ.

ಪುರುಷರ ಡಬಲ್ಸ್ ವಿಭಾಗದ ಮೊದಲ ಸುತ್ತಿನಲ್ಲಿ ಭಾರತದ ಅನುಭವಿ ಆಟಗಾರರಾದ ರೋಹನ್ ಬೋಪಣ್ಣ ಹಾಗೂ ಶ್ರೀರಾಂ ಬಾಲಾಜಿ ಜೋಡಿ ಫ್ರಾನ್ಸ್ನ ಗೇಲ್ ಮೋನ್ಫಿಲ್ಸ್ ಮತ್ತು ಎಡ್ವರ್ಡ್ ರೋಜರ್ ವ್ಯಾಸೆಲಿನ್ ಜೋಡಿ ವಿರುದ್ಧ ಸೆಣಸಲಿದೆ. ಪ್ಯಾರಿಸ್ ಒಲಿಂಪಿಕ್ಸ್ನ ಟೇಬಲ್ ಟಿನ್ನಿಸ್ ಪಂದ್ಯದ ಮಹಿಳಾ ಸಿಂಗಲ್ಸ್ನಲ್ಲಿ ಭಾರತದ ಶ್ರೀಜಾ ಅಕುಲಾ ಹಾಗೂ ಮಹಿಳಾ ಬಾಕ್ಸಿಂಗ್‌ನ 50 ಕೆಜಿ ವಿಭಾಗದಲ್ಲಿ ನಿಕತ್ ಝರೀನ್ ಮುಂದಿನ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.

https://x.com/siddaramaiah/status/1817536595970650154?t=otcDD00kQUBeN84H7DvrEA&s=19

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 hours ago

ದಾವಣಗೆರೆ | ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಕಾನೂನು ಬಾಹಿರವಾಗಿ ಮಕ್ಕಳ ಮಾರಾಟ ಕುರಿತು ಅರಿವು ಜಾಥ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ,...

ದಿನದ ಸುದ್ದಿ6 hours ago

ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಹೊಸದಾಗಿ ಮಂಜೂರಾಗಿರುವ ಅಲ್ಪಸಂಖ್ಯಾತರ 1 ಮೊರಾರ್ಜಿ ದೇಸಾಯಿ ಶಾಲೆ ಹಾಗೂ 3 ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಆಂಗ್ಲ...

ದಿನದ ಸುದ್ದಿ6 hours ago

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಈ ವರ್ಷದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಪಿ ಪೋರ್ಟಲ್‌ನಲ್ಲಿ ಡಿ.ಬಿ.ಟಿ ಮುಖಾಂತರ ಪರಿಶಿಷ್ಟ...

ದಿನದ ಸುದ್ದಿ7 hours ago

ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ...

ದಿನದ ಸುದ್ದಿ12 hours ago

ದಾವಣಗೆರೆ | ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಕ್ಕೆ ವಿಶೇಷ ಕಾರ್ಯಾಚರಣೆ ; ಒಂದೇ ದಿನ 1 ಕೋಟಿ 65 ಲಕ್ಷ ತೆರಿಗೆ ಸಂಗ್ರಹ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಿಸಲು ಸೋಮವಾರ ಹಮ್ಮಿಕೊಳ್ಳಲಾಗಿದ್ದ. ವಿಶೇಷ ಕಾರ್ಯಾಚರಣೆಯಲ್ಲಿ 1.ಕೋಟಿ 65 ಲಕ್ಷ ತೆರಿಗೆ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ...

ದಿನದ ಸುದ್ದಿ2 days ago

ರಾಜ್ಯದಲ್ಲಿ ಭಾರೀ ಮಳೆ ಸಂಭವ ; ಐದು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಸುದ್ದಿದಿನಡೆಸ್ಕ್:ನವೆಂಬರ್ 14ರಿಂದ ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದ್ದು, ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ,...

ದಿನದ ಸುದ್ದಿ2 days ago

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ. ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ...

ದಿನದ ಸುದ್ದಿ2 days ago

ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸ ಹೆಣ್ಣು ಮಕ್ಕಳಿಗೆ ಸ್ಫೂರ್ತಿ: ಡಿಸಿ ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ: ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸ ನಮ್ಮ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು...

ದಿನದ ಸುದ್ದಿ2 days ago

ದಾವಣಗೆರೆ | ಪರಿಶಿಷ್ಟ ಜಾತಿ, ಪಂಗಡದ ರೈತರಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ತಾಲ್ಲೂಕಿನ, ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ...

ದಿನದ ಸುದ್ದಿ3 days ago

ಮಧ್ಯ ಕರ್ನಾಟಕದ ಕೇಂದ್ರಬಿಂದು ದಾವಣಗೆರೆ ಕೈಗಾರಿಕೆ, ಐಟಿಬಿಟಿ ಹಬ್ ಆಗದಿರುವುದು ದುರದೃಷ್ಟಕರ : ಜಿ. ಬಿ. ವಿನಯ್ ಕುಮಾರ್ ವಿಷಾದ

ಸುದ್ದಿದಿನ,ದಾವಣಗೆರೆ: ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯು ನಿಜವಾಗಿಯೂ ಇಂಡಸ್ಟ್ರಿಯಲ್, ಐಟಿಬಿಟಿ ಹಬ್ ಇಷ್ಟರೊಳಗೆ ಆಗಬೇಕಿತ್ತು. ಮ್ಯಾಂಚೆಸ್ಟರ್ ಆಫ್ ಕರ್ನಾಟಕ ಖ್ಯಾತಿ ಹೊಂದಿದ್ದ ಇಲ್ಲಿ ಯಾವುದೇ ದೊಡ್ಡ...

Trending