ದಿನದ ಸುದ್ದಿ
ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ
ಸುದ್ದಿದಿನ,ದಾವಣಗೆರೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜೂನ್ 8 ಮತ್ತು 9 ರಂದು 25 ಜನ ರೈತರಿಗೆ ಕೋಳಿ ಸಾಕಾಣಿಕೆ ಕುರಿತು ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ತರಬೇತಿಗೆ ಹಾಜರಾಗಬೇಕು. ತರಬೇತಿಗೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ. ಸಂ. 08192-233787 ಗೆ ಸಂಪರ್ಕಿಸಲು ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243