ಕ್ರೀಡೆ

ಐಪಿಎಲ್ ಕ್ರಿಕೆಟ್ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಗಳಿಸಿದ ಕೋಲ್ಕೊತಾ ನೈಟ್ ರೈಡರ್ಸ್ ತಂಡದ ಪ್ಲೇಆಫ್ ಆಸೆ ಜೀವಂತ

Published

on

ಸುದ್ದಿದಿನ ಡೆಸ್ಕ್ : ಮುಂಬೈ ಡಿ.ವೈ. ಪಾಟೀಲ್ ಕ್ರೀಡಾ ಅಕಾಡೆಮಿಯಲ್ಲಿ ಕಳೆದ ರಾತ್ರಿ ನಡೆದ ಐಪಿಎಲ್ ಟಿ 20ಕ್ರಿಕೆಟ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ 52 ರನ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ತನ್ನ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

166ರನ್ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್17.3 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ನಷ್ಟಕ್ಕೆ 113ರನ್ ಗಳಿಸಲಷ್ಟೇ ಶಕ್ತಗೊಂಡಿತು. ಮುಂಬೈ ಪರ ಏಕಾಂಗಿ ಹೋರಾಟ ನಡೆಸಿದ ಇಶಾನ್ ಕಿಶನ್ 51ರನ್ ಗಳಿಸಿದರು.

ಕೋಲ್ಕೊತಾ ಪರ ಪ್ಯಾಟ್ ಕಮಿನ್ಸ್ ಮತ್ತು ಆಂಡ್ರೆ ರಸೆಲ್ ಕ್ರಮವಾಗಿ 3 ಮತ್ತು 2 ವಿಕೆಟ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಕೋಲ್ಕತಾ ತಂಡ 20 ಓವರ್ ಗಳಲ್ಲಿ 9ವಿಕೆಟ್‌ಗೆ165 ರನ್ ಕಲೆಹಾಕಿತು. ವೆಂಕಟೇಶ್ ಅಯ್ಯರ್ ಮತ್ತು ನಿತೀಶ್ ರಾಣಾ ತಲಾ 43ರನ್ ಗಳಿಸಿದರು.

ಮುಂಬೈ ತಂಡದ ಪರ ಶಿಸ್ತಿನ ಬೌಲಿಂಗ್ ನಡೆಸಿದ ವೇಗಿ ಜಸ್ ಪ್ರಿತ್ ಬುಮ್ರಾ ಕೇವಲ 10ರನ್ ನೀಡಿ 5 ವಿಕೆಟ್ ಉರುಳಿಸುವ ಮೂಲಕ ಪಂದ್ಯ ಶ್ರೇಷ್ಠ ಗೌರವಕ್ಕೆ ಭಾಜನರಾದರು. ಮುಂಬೈನಲ್ಲಿ ರಾತ್ರಿ 7.30ಕ್ಕೆ ಆರಂಭವಾಗಲಿರುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version