ರಾಜಕೀಯ

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅಧಿಕಾರ ಸ್ವೀಕಾರ

Published

on

ಸುದ್ದಿದಿನ, ಬೆಂಗಳೂರು |ಕೆಪಿಸಿಸಿ‌ ಅಧ್ಯಕ್ಷರಾಗಿ ಇಂದು (ಜುಲೈ11) ದಿನೇಶ್ ಗುಂಡೂರಾವ್ ಅವರು ಅಧಿಕಾರವಹಿಸಿಕೊಂಡರು. ಹಾಗೇ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆಯವರು ಅಧಿಕಾರ ಸ್ವೀಕರಿಸಿದರು. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ವಹಿಸಿಕೊಡಿರುವ ದಿನೇಶ್ ಗುಂಡೂರಾವ್ ಅವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲಿಸಿಕೊಡುವ ಜವಾಬ್ದಾರಿ ಹೆಚ್ಚಾಗಿದೆ.

ಬೆಂಗಳೂರಿನ ಅರಮನೆಯಲ್ಲಿ ಅದ್ದೂರಿಯಾಗಿ ನಡೆದ ಬೃಹತ್ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ದಿನೇಶ್ ಗುಂಡೂರಾವ್ ಅವರಿಗೆ ಬಾವುಟ ನೀಡುವ ಮೂಲಕ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರ ಮಾಡಿದರು.

ದಿನೇಶ್ ಗುಂಡೂರಾವ್ ಅವರು 2013ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಸಿದ್ದರಾಮಯ್ಯ ನವರ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಸಂಪುಟ ಪುನಾರಚನೆಯಾದಾಗ ಸಂಪುಟದಿಂದ ಹೊರಬಂದು ಕೆಪಿಸಿಸಿಯ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿರುವ ಇವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಆಪ್ತರಲ್ಲಿ ಇವರೂ ಒಬ್ಬರು.

ಸುದ್ದಿದಿನ.ಕಾಂ|ವಾಟ್ಸಾಪ್|9985715401

Leave a Reply

Your email address will not be published. Required fields are marked *

Trending

Exit mobile version