ದಿನದ ಸುದ್ದಿ
ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಪ್ರತಿಭಟನೆ
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಠಿ ಹಾಗೂ ಅನಾವೃಷ್ಠಿ ಪರಿಸ್ಥಿತಿ ನಿಭಾಯಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರತಿಭಟನೆ ಹಮ್ಮಿಕೊಂಡಿದೆ.
ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಒಂದು ದಿನದ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ. ರಾಜ್ಯದ ಸ್ಥಿತಿಗತಿಯತ್ತ ಕೇಂದ್ರದ ಗಮನ ಸೆಳೆಯುವಲ್ಲಿ ವಿಫಲರಾದ ರಾಜ್ಯದ ಮತ್ತು ಕೇಂದ್ರ ಸಚಿವರ ವಿರುದ್ಧ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಹಿರಿಯ ನಾಯಕ ಎಚ್.ಕೆ.ಪಾಟೀಲ್ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಕೃಪೆ : ಡೆಮಾಕ್ರಟಿಕ್ ನ್ಯೂಸ್
ಸುದ್ದಿದಿನ.ಕಾಂ|ವಾಟ್ಸಾಪ್|9980346243