ದಿನದ ಸುದ್ದಿ

KPSC | 2 ತಿಂಗಳೊಳಗೆ ಮರು ಪರೀಕ್ಷೆ

Published

on

ಸುದ್ದಿದಿನಡೆಸ್ಕ್:ಇತ್ತೀಚಿನ ಕೆ.ಪಿ.ಎಸ್.ಸಿ. ಗಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ, ಅಸಮರ್ಪಕ ಕನ್ನಡಾನುವಾದ ಹಿನ್ನೆಲೆ, ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ, 2 ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ, ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ವಿಷಯ ಪ್ರಕಟಿಸಿರುವ ಮುಖ್ಯಮಂತ್ರಿ, ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು, ಸೇವೆಯಿಂದ ಅಮಾನತು ಮಾಡಲಾಗಿದೆ. ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿ ಹಿಡಿದು, ಪರೀಕ್ಷಾರ್ಥಿಗಳ ಹಿತ ಕಾಯಲು ಬದ್ಧ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version