ದಿನದ ಸುದ್ದಿ

KPSC | ಮರು ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯಲ್ಲಿ ಅಸಮರ್ಪಕ ಕನ್ನಡ ಅನುವಾದದ ಪ್ರಶ್ನೆಗಳ ಹಿನ್ನೆಲೆಯಲ್ಲಿ ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ೨ ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್‌ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪ್ರಕಟಿಸಿರುವ ಅವರು, ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version