ರಾಜಕೀಯ
ರೇವಣ್ಣ ಬಿಸ್ಕೆಟ್ ಎಸೆದಿದ್ದಕ್ಕೆ ಸಚಿವ ಕೃಷ್ಣ ಭೈರೇಗೌಡ ಏನು ಹೇಳಿದ್ರು ಗೊತ್ತಾ?
ಸುದ್ದಿದಿನ ಡೆಸ್ಕ್: ಕೊಡಗಿನಲ್ಲಿ ಸಂತ್ರಸ್ತರಿಗೆ ಸಚಿವ ಎಚ್.ಡಿ.ರೇವಣ್ಣ ಬಿಸ್ಕೆಟ್ ಎಸೆದಿರುವ ವಿಚಾರ ವ್ಯಾಪಕ ಟೀಕೆಗೆ ಗುರಿಯಾಗಿದೆ. ಇನ್ನು ಸಚಿವ ಎಚ್.ಡಿ.ರೇವಣ್ಣ ಬಿಸ್ಕೆಟ್ ಎಸೆದಿರುವ ವಿಡಿಯೋ ಸೋಷಿಯಲ್ ಮಿಡಿಯಾಗಲ್ಲಿ ವೈರಲ್ ಆಗಿದೆ.
ಆದರೆ ಸಚಿವ ಕೃಷ್ಣ ಬೈರೇಗೌಡ ಮಾತ್ರ ಭಿನ್ನ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಎಚ್.ಡಿ.ರೇವಣ್ಣ ಕೊಡಗಿನಲ್ಲಿ ನೆರೆ ಸಂತ್ರಸ್ತರಿಗೆ ಬಿಸ್ಕೆಟ್ ವಿತರಣೆ ವೇಳೆ ಆಕಸ್ಮಿಕವಾಗಿ ಘಟನೆ ನಡೆದಿರಬಹುದು. ಮಾಡಲೇಬೇಕೆಂಬ ಉದ್ದೇಶದಿಂದ ಇದು ನಡೆದಿರುವುದಿಲ್ಲ ಎಂದು ಸಮರ್ಥನೆ ನೀಡಿದ್ದಾರೆ. ಇದು ಕೂಡ ಜನರಿಂದ ಟೀಕೆಗೆ ಗುರಿಯಾಗಿದೆ.
ಸಿಎಂ ಯಾರೆಂದು ಗೊಂದಲವಿದೆ ಎನ್ನುತ್ತಾರೆ. ಆದರೆ ಸಂವಿಧಾನಬದ್ಧವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದವರೇ ಸಿಎಂ ಎಂದು ನಾನು ಭಾವಿಸಿದ್ದು, ನನಗೆ ಯಾವುದೇ ಗೊಂದಲವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.