ದಿನದ ಸುದ್ದಿ

ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ , ಬೆಳೆ ಪದ್ದತಿಗಳು ಮತ್ತು ಬೆಳೆ ವೈವಿಧ್ಯಕರಣ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣ ಅಭಿವೃದ್ದಿ, ನೀರಿನ ಸಾಮರ್ಥ ಬಳಕೆ, ಇನ್ನಿತರೆ ಯಾವುದಾದgರೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಿಲ್ಲೆಯ ಆಸಕ್ತ ರೈತರಿಂದ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಹಾಗೂ ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ ಚಟುವಟಿಕೆಗಳ ಬಗ್ಗೆ ತಾಲ್ಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದ ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಮತ್ತು ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಆಗಸ್ಟ್ 5 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version