ದಿನದ ಸುದ್ದಿ

ಕರಾಮುವಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ

Published

on

ಸುದ್ದಿದಿನ,ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು ಜೂ.10ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5. ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0821-2515944ಗೆ ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಕುಲಸಚಿವರಾದ ಪ್ರೊ.ಆರ್.ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version