ದಿನದ ಸುದ್ದಿ
ದಾವಣಗೆರೆ | ಮೇ 15 ರಂದು ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಉದ್ಘಾಟನೆ
ಸುದ್ದಿದಿನ,ದಾವಣಗೆರೆ : ಮೇ 15 ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಆನ್ಲೈನ್ ತರಬೇತಿ ಶಿಬಿರವನ್ನು ಕುಲಪತಿಗಳ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಇದನ್ನೂ ಓದಿ | ದಾವಣಗೆರೆ | ಆಕ್ಸಿಮೀಟರ್‍ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಜಪ್ತಿ, ದಂಡ : ಎಚ್ಚರಿಕೆ
ಕಾರ್ಯಕ್ರಮವನ್ನು ಮೈಸೂರು ಮಹಾಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಓಡೆಯರ್ ಉದ್ಠಾಟಿಸುವರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕುಲಪತಿಗಳಾದ ಪ್ರೊ.ಎಸ್.ವಿದ್ಯಾಶಂಕರ್ ಅಧ್ಯಕ್ಷತೆಯನ್ನು ವಹಿಸುವರು.
ಕಾರ್ಯಕ್ರಮದಲ್ಲಿ ಕುಲಸಚಿವರಾದ ಪ್ರೊ.ಆರ್.ರಾಜಣ್ಣ ಉಪಸ್ಥಿತರಿರುವರು ಎಂದು ಸಂಯೋಜನಾಧಿಕಾರಿಯಾದ ಜೈನಹಳ್ಳಿ ಸತ್ಯನಾರಾಯಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243