Connect with us

ದಿನದ ಸುದ್ದಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ: ದಂಡ ಶುಲ್ಕವಿಲ್ಲದೇ ಪರೀಕ್ಷಾ ಶುಲ್ಕ ಪಾವತಿಸಲು ಆಗಸ್ಟ್ 10 ಕೊನೆಯ ದಿನ

Published

on

ಸುದ್ದಿದಿನ,ಕಲಬುರಗಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ 2014-15ನೇ ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಪಡೆದ ಬಿ.ಎ., ಎಂ.ಕಾಂ. ಪದವಿಯ ಅಂತಿಮ ವರ್ಷದ ಹಾಗೂ 2019-20ನೇ ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಪಡೆದ ಎಂ.ಎ., ಎಂ.ಕಾಂ. ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗಾಗಿ ಪರೀಕ್ಷಾ ಶುಲ್ಕ ಪಾವತಿಸಬೇಕೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕಲಬುರಗಿ ಪ್ರಾದೇಶಿಕ ನಿರ್ದೇಶಕ ಡಾ. ಸಂಗಮೇಶ್ ಹಿರೇಮಠ್ ಅವರು ತಿಳಿಸಿದ್ದಾರೆ.

2014-15 ನೇ ಸಾಲಿನಲ್ಲಿ ಪ್ರವೇಶ ಪಡೆದ ಅಂತಿಮ ವರ್ಷದ ಬಿ.ಎ. ಬಿ.ಕಾಂ. ಪದವಿಯ ವಿದ್ಯಾರ್ಥಿಗಳಿಗೆ ಪೂರ್ಣ ಪರೀಕ್ಷಾ ಶುಲ್ಕ 950 ರೂ. ಹಾಗೂ 2019-20ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ಅಂತಿಮ ವರ್ಷದ ಎಂ.ಎ., ಎಂ.ಕಾಂ. ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ 1200 ರೂ.ಗಳು ಹಾಗೂ ಶುಲ್ಕ ವಿನಾಯಿತಿ ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 50 ರೂ.ಗಳನ್ನು ನಿಗದಿಪಡಿಸಲಾಗಿದೆ. ದಂಡ ಶುಲ್ಕವಿಲ್ಲದೇ ಪರೀಕ್ಷಾ ಶುಲ್ಕ ಪಾವತಿಸಲು 2020ರ ಆಗಸ್ಟ್ 10 ಕೊನೆಯ ದಿನವಾಗಿದೆ. 200ರೂ.ಗಳ ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಆಗಸ್ಟ್ 24 ಕೊನೆಯ ದಿನವಾಗಿದೆ.

ವಿದ್ಯಾರ್ಥಿಗಳು ಕಡ್ಡಾಯವಾಗಿ ವಿಶ್ವವಿದ್ಯಾನಿಲಯದ www.ksoumysuru.ac.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಹಾಗೂ ಪರೀಕ್ಷಾ ಶುಲ್ಕವನ್ನು ಎಲ್ಲ ಅಗತ್ಯ ವಿವರಗಳೊಂದಿಗೆ ಭರ್ತಿ ಮಾಡಬೇಕು. ಅರ್ಜಿ ಸಲ್ಲಿಸಲು ತೊಂದರೆಯಾದಲ್ಲಿ ಆನ್‍ಲೈನ್ ಸಹಾಯವಾಣಿ ಸಂಖ್ಯೆ 9663482133, 966482311 ಗಳಿಗೆ ಸಂಪರ್ಕಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಪ್ರಾದೇಶಿಕ ನಿರ್ದೇಶಕರ ಮೊಬೈಲ್ ಸಂಖ್ಯೆ 9916783555 ಅಥವಾ 08472-265868 ಗೆ ಸಂಪರ್ಕಿಸಲು ಕೋರಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending