ದಿನದ ಸುದ್ದಿ
ಪ್ರಯಾಣ ದರ ಏರಿಕೆ ಆದೇಶಕ್ಕೆ ತಡೆ; ಸಾರಿಗೆ ನಿಯಮಕ್ಕೆ ಮುಖ್ಯಮಂತ್ರಿ ಸೂಚನೆ
ಸುದ್ದಿದಿನ ಡೆಸ್ಕ್: ಪೆಟ್ರೋಲ್, ಡಿಸೇಲ್ ದರ ಏರಿಕೆ ಬೆನ್ನಲ್ಲೇ ರಾಜ್ಯ ಸಾರಿಗೆ ಸಂಸ್ಥೆ ಗಣಪತಿ ಹಬ್ಬದ ನಂತರ ಬಸ್ ಪ್ರಯಾಣ ದರ ಹೆಚ್ಚಿಸಲು ನಿರ್ಧರಿಸಿತ್ತು. ಇದು ಪ್ರಯಾಣಿಕರ ಹೊರೆ ಬೀಳಲಿದೆ ಎಂಬುದನ್ನರಿತ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಯಾಣ ದರ ಏರಿಕೆ ಆದೇಶಕ್ಕೆ ಬ್ರೇಕ್ ಹಾಕಿದ್ದಾರೆ.
ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದ್ದ ಆದೇಶ ತಡೆ ಹಿಡಿಯಲು
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಸೂಚನೆ ನೀಡಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಪ್ರಯಾಣ ದರ ಹೆಚ್ಚಿಸಲು
ನಿರ್ಧರಿಸಲಾಗಿತ್ತು. ಆದರೆ, ಇದು ಪ್ರಯಾಣಿಕರ ಮೇಲೆ ಹೆಚ್ಚು ಆರ್ಥಿಕ ಹೊರೆಬೀಳುವುದನ್ನು ತಪ್ಪಿಸಲು ಬಸ್ ಪ್ರಯಾಣ ದರ ಏರಿಕೆಯನ್ನು ಕೂಡಲೇ ತಡೆಹಿಡಿಯುವಂತೆ ನಿಗಮದ ವ್ಯವಸ್ಥಾಪಕರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.