ದಿನದ ಸುದ್ದಿ

ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲೇ ಸಾರಿಗೆ ನೌಕರ ನೇಣಿಗೆ ಶರಣು..!

Published

on

ಸುದ್ದಿದಿನ,ಬೆಳಗಾವಿ: ಸಾರಿಗೆ ಸಚಿವ ಲಕ್ಷ್ಮಣ ಸವದಿಯವರ ತವರು ಜಿಲ್ಲೆಯಲ್ಲಿ ಸಾರಿಗೆ ನೌಕರ ಶಿವಕುಮಾರ್‌ ನೀಲಗಾರ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೌಕರ ಶಿವಕುಮಾರ್ ಅವರು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳು ಕಿರುಕುಳ ನೀಡಿದ್ದು ಮನ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | ಜನಸ್ಪಂದನ ಸಭೆ ದೂರು ನೀಡುವ ವೇದಿಕೆಯಾಗಬಾರದು : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ಶಿವಕುಮಾರ್ ನೀಲಗಾರ ಅವರು ಬೆಳಗಾವಿ ಜಿಲ್ಲೆಯ ಸವದತ್ತಿ ಘಟಕದ ಬಸ್ ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು. ಸವದತ್ತಿಯಲ್ಲಿರುವ ತಮ್ಮ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ಇವರು ವಾಕರಾರಸಾ ಸಂಸ್ಥೆಯ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಕಳೆದ 12 ವರ್ಷಗಳಿಂದ ಸಾರಿಗೆ ಇಲಾಖೆಯಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version