ದಿನದ ಸುದ್ದಿ

ಫೆ.2ರಂದು ಕೆ ಎಸ್‍ ಆರ್ ಟಿ ಸಿ ತಾಂತ್ರಿಕ ಸಹಾಯಕ ಮತ್ತು ಭದ್ರತಾರಕ್ಷಕರ ಹುದ್ದೆ ಪರೀಕ್ಷೆ : ಸಕಲ ಸಿದ್ದತೆ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ರಸ್ತೆ ಸಾರಿಗೆ ನಿಗಮದ ತಾಂತ್ರಿಕ ಸಹಾಯಕ ಮತ್ತು ಭದ್ರತಾರಕ್ಷಕ ದರ್ಜೆ-3 ರ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಫೆ.02 ರಂದು ನಡೆಸಲಾಗುತ್ತಿರುವ ಸಾಮಾನ್ಯ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಮಾನ್ಯ ಸಾಮಥ್ರ್ಯ ಸಭಾಂಗಣದಲ್ಲಿ ಪರೀಕ್ಷೆ ಕುರಿತು ಪ್ರಿನ್ಸಿಪಾಲರು/ಮೇಲ್ವಿಚಾರಕರು/ಮಾರ್ಗಾಧಿಕಾರಿಗಳು/ವೀಕ್ಷಕರೊಂದಿಗೆ ಚರ್ಚಿಸಲು ಆಯೋಜಿಸಿದ್ದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮತ್ತು ಪರೀಕ್ಷಾ ವೇಳೆಯಲ್ಲಿ ಯಾವುದೇ ಗೊಂದಲಗಳಿಗೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಿರಂಜನ್. ಜಿ.ಸಿ ಮಾತನಾಡಿ, ಫೆ.02 ರಂದು ನಡೆಯುತ್ತಿರುವ ತಾಂತ್ರಿಕ ಸಹಾಯಕ ಮತ್ತು ಭದ್ರತಾರಕ್ಷಕ ದರ್ಜೆ-3 ರ ಹುದ್ದೆಗಳ ನೇಮಕಾತಿಯ ಸಾಮಾನ್ಯ ಸಾಮಥ್ರ್ಯದ ಪರೀಕ್ಷೆಯು ನಗರದ 05 ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಎಲ್ಲಾ ಕೇಂದ್ರಗಳಿಗೂ ಮೇಲ್ವಿಚಾರಕರು, ಮಾರ್ಗಾಧಿಕಾರಿಗಳು ಮತ್ತು ವೀಕ್ಷಕರನ್ನು ನೇಮಿಸಲಾಗಿದೆ.

ನಗರದ ಮೋತಿ ವೀರಪ್ಪ ಪದವಿಪೂರ್ವ ಕಾಲೇಜು, ಸೀತಮ್ಮ ಬಾಲಕಿಯರ ಪದವಿಪೂರ್ವ ಕಾಲೇಜು, ಎಕ್ಸ್ ಮುನ್ಸಿಪಾಲ್ ಕಾಲೇಜು ಮತ್ತು ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಹಾಗೂ ಎ.ವಿ.ಕೆ ಮಹಿಳಾ ಕಾಲೇಜುಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು. ಬೆಳಿಗ್ಗೆ 9.30 ರಿಂದ 12.30 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ 4.30 ರವೆರೆಗೆ ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

ಎಲ್ಲಾ ಕೇಂದ್ರಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಪರೀಕ್ಷೆಗೆ 45 ನಿಮಿಷ ಮುಂಚಿತವಾಗಿ ಬಂದು ಪರೀಕ್ಷಾ ಕೊಠಡಿಯ ವರದಿ ಸಿದ್ದಪಡಿಸಿಕೊಳ್ಳಬೇಕು. ಹಾಗೂ ಪರೀಕ್ಷೆ ನಡೆಯುವ ಕೊಠಡಿಯ ಒಳಗೆ ವಾಚ್, ಕ್ಯಾಲುಕಿಲೇಟರ್, ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಬರುವಂತಿಲ್ಲ್ಲ. ಪರೀಕ್ಷೆ ಮುಗಿದ ನಂತರ ಗೈರು ಹಾಜರಾಗಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‍ಲೈನ್‍ನಲ್ಲಿ ಅಪ್‍ಡೇಟ್ ಮಾಡಿಸಬೇಕು ಎಂದರು.

ಕಾಲೇಜಿನ ಪ್ರಿನ್ಸಿಪಾಲರುಗಳನ್ನು ಆಯಾ ಕಾಲೇಜಿಗೆ ಮೇಲ್ವಿಚಾರಕರನ್ನಾಗಿ ನೇಮಿಸಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾಣುವಂತೆ ಪರೀಕ್ಷಾ ವೇಳಾಪಟ್ಟಿಯನ್ನು ಅಲ್ಲಲ್ಲಿ ಅಳವಡಿಸಿರಬೇಕು. ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು ಮತ್ತು ಸಮೀಪವಿರುವ ಜೆರಾಕ್ಸ್ ಅಂಗಡಿಗಳನ್ನು ಪೊಲೀಸರ ಸಹಾಯದಿಂದ ಮುಚ್ಚಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಮಾತನಾಡಿ, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಯಾವುದೇ ಅವಘಡಗಳು ಸಂಭವಿಸದಂತೆ ಜಾಗರೂಕರಾಗಿ ಕರ್ತವ್ಯ ನಿರ್ವಹಿಸಬೇಕು. ದಾವಣಗೆರೆ ತಾಲ್ಲೂಕು ತಹಶೀಲ್ದಾರು ಮತ್ತು ಉಪವಿಭಾಗಾಧಿಕಾರಿಯವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಬೇಕು ಎಂದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ, ದಾವಣಗೆರೆ ತಾಲ್ಲೂಕು ತಹಶೀಲ್ದಾರ ಸಂತೋಷ್‍ಕುಮಾರ್ ಹಾಗೂ ಜಿಲ್ಲಾ ಖಜಾನೆ ಆಧಿಕಾರಿ ರಾಜಣ್ಣ ಹಾಗೂ 5 ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version