ದಿನದ ಸುದ್ದಿ
ದಾವಣಗೆರೆ | ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣ ಹೊಸ ಕಟ್ಟಡಕ್ಕೆ ಸ್ಥಳಾಂತರ
ಸುದ್ದಿದಿನ,ದಾವಣಗೆರೆ : ಹೈಸ್ಕೂಲ್ ಮೈದಾನದಲ್ಲಿ ಮೇ 4 ರಂದು ಚುನಾವಣಾ ರ್ಯಾಲಿಯಲ್ಲಿ ಎಐಸಿಸಿ, ಕಾರ್ಯದರ್ಶಿಯವರಾದ ಪ್ರಿಯಾಂಕ ಗಾಂಧಿ ವಾದ್ರ, ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಹೈಸ್ಕೂಲ್ ಮೈದಾನದಲ್ಲಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಒಂದು ದಿನ ಮಾತ್ರ ಹೊಸ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ವಿಭಾಗೀಯ ನಿಯಂತ್ರಕರಾದ ಶ್ರೀನಿವಾಸ್‍ಮೂರ್ತಿ ಸಿ.ಇ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243