Connect with us

ದಿನದ ಸುದ್ದಿ

‘ಕೆಎಸ್‌ಆರ್‌ಟಿಸಿ’ ಟ್ರೇಡ್‌ಮಾರ್ಕ್ ಬಳಸುವಂತಿಲ್ಲ ಎಂಬ ಸುದ್ದಿ ಸುಳ್ಳು ; ಕೆ ಎಸ್ ಆರ್ ಟಿ ಸಿ ಸ್ಪಷ್ಟನೆ

Published

on

ಸುದ್ದಿದಿನ, ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ “ಕೆಎಸ್‌ಆರ್‌ಟಿಸಿ” ಎಂದು ಬಳಸುವಂತಿಲ್ಲವೆಂದು, ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿರವರು ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದು, ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ ಎಂಬ ಮಾಧ್ಯಮಗಳ ವರದಿಯನ್ನು ನೋಡಿ ಆಶ್ಚರ್ಯವಾಗಿದೆ ಎಂದು ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇರಳ ಎಸ್‌ಆರ್‌ಟಿಸಿಯು, ಕೆಎಸ್ಆರ್‌ಟಿಸಿ / ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಲು ಉದ್ದೇಶಿಸಿದೆ ಎಂದು ಮಾಧ್ಯಮಗಳಲ್ಲಿನ ಸುದ್ದಿ ಪ್ರಕಟವಾಗಿದೆ. ಒಂದು ವೇಳೆ ಅಂತಹ ನೋಟಿಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತವಾದ ಉತ್ತರವನ್ನು ನೀಡಲಾಗುತ್ತದೆ ಎಂದಿದ್ದಾರೆ.

ಈ ಸಂಬಂಧ ಇಲಾಖೆಯ ಟ್ವಿಟರ್ ಖಾತೆಯಲ್ಲಿ “ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಾವು ಪ್ರಸ್ತುತ ನಮ್ಮ ವಕೀಲರನ್ನು ಸಂಪರ್ಕಿಸುತ್ತಿದ್ದೇವೆ. ಏತನ್ಮಧ್ಯೆ, ಪತ್ರಿಕೆಗಳಲ್ಲಿ ಈ ರೀತಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹೇಳಿದೆಯೆನ್ನಲಾದ ಸತ್ಯಕ್ಕೆ ದೂರವಾದ ಹಾಗೂ ಕಾನೂನಾತ್ಮಕವಲ್ಲದ ವರದಿಗಳನ್ನು ಪ್ರಕಟಿಸದಂತೆ ವಿನಂತಿಸಲಾಗಿದೆ” ಎಂದು ಟ್ವೀಟ್ ಮಾಡಿದೆ.

ಈ ಬಗ್ಗೆ ಕಾನೂನು ಕ್ರಮಗಳನ್ನು ಜರುಗಿಸುವ ನಮ್ಮ ಹಕ್ಕನ್ನು ಸಂಸ್ಥೆಯು ಕಾಯ್ದಿರಿಸಿದೆ. ಆದ್ದರಿಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್‌ಆರ್‌ಟಿಸಿ’ ಟ್ರೇಡ್‌ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಆದೇಶ ಮತ್ತು ನಿಷೇಧವಿರುವುದಿಲ್ಲ.

ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಾವು ಪ್ರಸ್ತುತ ನಮ್ಮ ವಕೀಲರನ್ನು ಸಂಪರ್ಕಿಸುತ್ತಿದ್ದೇವೆ. ಏತನ್ಮಧ್ಯೆ, ಪತ್ರಿಕೆಗಳಲ್ಲಿ ಈ ರೀತಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹೇಳಿದೆಯೆನ್ನಲಾದ ಸತ್ಯಕ್ಕೆ ದೂರವಾದ ಹಾಗೂ ಕಾನೂನಾತ್ಮಕವಲ್ಲದ ವರದಿಗಳನ್ನು ಪ್ರಕಟಿಸದಂತೆ ವಿನಂತಿಸಲಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ

Published

on

ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.

ಸೇವೆಯನ್ನು ಈ ಮೂಲಕ https://app.indiapost.gov.in/customer.selfservice/home ಪೂರ್ಣಗೊಳಿಸಿದ ನಂತರ ಸೃಷ್ಟಿಯಾಗುವ ಲೇಬಲ್, ಕ್ಯೂಆರ್ ಅನ್ನು ಮುದ್ರಿಸಿ ಹತ್ತಿರದ ಯಾವುದೇ ಅಂಚೆ ಕಚೇರಿಯಲ್ಲಿ ಸ್ಪೀಡ್ ಫೆÇೀಸ್ಟ್, ಪಾರ್ಸೆಲ್ ಅನ್ನು ಬುಕ್ಕಿಂಗ್ ಸಂಖ್ಯೆಯ ಮೂಲಕ ಹಸ್ತಾಂತರಿಸಬಹುದು. ಸಾರ್ವಜನಿಕರು ಈ ನವೀನ ಡಿಜಿಟಲ್ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 26 ಕೊನೆಯ ದಿನವಾಗಿದೆ.

ವಿಶೇಷ ಘಟಕ ಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಶಿಷ್ಯ ವೇತನ ನೀಡಲಾಗುವುದು. ತರಬೇತಿಯು 2026 ರ ಜನವರಿಯಿಂದ ಡಿಸೆಂಬರ್‍ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.

ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದಿರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇಲ್ಲಿ, ಮೊ.9480841218 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending