ದಿನದ ಸುದ್ದಿ
ಕುದುರೆಕೊಂಡ ಗ್ರಾಮದ ಬಳಿ ಗಾಂಜಾ ವಶ : ಆರೋಪಿಗಳು ನಾಪತ್ತೆ
ಸುದ್ದಿದಿನ,ದಾವಣಗೆರೆ : ನ್ಯಾಮತಿ ತಾಲ್ಲೂಕು ಕುದುರೆಕೊಂಡ ಗ್ರಾಮದ ಬಳಿ ಜಮೀನಿನಲ್ಲಿ ಒಣ ಗಾಂಜಾ ಹಾಗೂ ಅಡಿಕೆ ತೋಟವೊಂದರಲ್ಲಿ ಬೆಳೆದಿದ್ದ ಗಾಂಜಾ ಗಿಡಗಳಿಂದ ಹಸಿ ಗಾಂಜಾ ವನ್ನು ಅಬಕಾರಿ ಇಲಾಖೆ ಪತ್ತೆ ಮಾಡಿ, ಜಪ್ತಿ ಮಾಡಿಕೊಂಡಿದ್ದು, ಆರೋಪಿತರು ನಾಪತ್ತೆಯಾಗಿದ್ದಾರೆ. ಅಬಕಾರಿ ಇಲಾಖೆ ತನಿಖೆ ಮುಂದುವರೆಸಿದೆ.
ಅಬಕಾರಿ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ, ಹೊನ್ನಾಳಿ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ನ್ಯಾಮತಿ ತಾಲ್ಲೂಕು ಕುದುರೆಕೊಂಡ ಗ್ರಾಮದ ರುದ್ರಪ್ಪ ಬಿನ್ ಸಣ್ಣ ತಿಮ್ಮಪ್ಪ ಅವರಿಗೆ ಸೇರಿದ ಜಮೀನಿನಲ್ಲಿ ದಾಳಿ ನಡೆಸಿ ಶೋಧಿಸಿದ ಸಂದರ್ಭದಲ್ಲಿ ಮೆಕ್ಕೆಜೋಳ ದಿಂಡು ಸಂಗ್ರಹಿಸಿದ ಸ್ಥಳದಲ್ಲಿ ಬಕೆಟ್ ಒಂದರಲ್ಲಿ ಗಾಂಜಾ ಎಲೆ, ಗಾಂಜಾ ತೆನೆಯ ಪುಡಿ ಹಾಗೂ ಗಾಂಜಾ ಬೀಜಗಳ ಮಿಶ್ರಿತ ಒಟ್ಟು 268 ಗ್ರಾಂ ನಷ್ಟು ಒಣ ಗಾಂಜಾ ಪತ್ತೆ ಹಚ್ಚಿದ್ದು, ಜಪ್ತಿ ಮಾಡಿಕೊಂಡು, ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿರುತ್ತಾರೆ. ಆರೋಪಿ ನಾಪತ್ತೆಯಾಗಿದ್ದು, ತನಿಖೆ ಮುಂದುವರೆದಿದೆ.
ಇದೇ ಗ್ರಾಮದ ಲಕ್ಷ್ಮಪ್ಪ ಬಿನ್ ಗಿರಿಯಪ್ಪ ಅವರಿಗೆ ಸೇರಿದ ಅಡಿಕೆ ತೋಟದಲ್ಲಿ ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿರುವುದು ಕಂಡುಬಂದಿದ್ದು, ಸುಮಾರು 134 ಗ್ರಾಂ ನಷ್ಟು ಹಸಿ ಗಾಂಜಾ ಜಪ್ತಿ ಮಾಡಿಕೊಂಡು, ಪ್ರಕರಣ ದಾಖಲಿಸಲಾಗಿದೆ. ಆರೋಪಿ ನಾಪತ್ತೆಯಾಗಿದ್ದು ತನಿಖೆ ಮುಂದುವರೆದಿದೆ. ಹೀಗೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 268 ಗ್ರಾಂ ಒಣ ಗಾಂಜಾ ಮತ್ತು 134 ಗ್ರಾಂ ಹಸಿ ಗಾಂಜಾ ವಶಕ್ಕೆ ಪಡೆದಿದ್ದು, ಒಟ್ಟು 4500 ರೂ. ಗಳ ಅಂದಾಜು ಮೌಲ್ಯ ಮಾಡಲಾಗಿದೆ.
ಹೊಸಪೇಟೆ ವಿಭಾಗದ ಅಬಕಾರಿ ಜಂಟಿ ಆಯುಕ್ತರು ಇವರ ನಿರ್ದೇಶನದಂತೆ, ಅಬಕಾರಿ ಉಪ ಆಯುಕ್ತ ಬಿ. ಶಿವಪ್ರಸಾದ್ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಅಧೀಕ್ಷಕ ಎಸ್.ಆರ್. ಮುರುಡೇಶ್ ಹಾಗೂ ಅಬಕಾರಿ ನಿರೀಕ್ಷಕ ಗಿರೀಶ್ ಹೆಚ್.ಕೆ. ಅವರು ಕಳೆದ ಮಾ. 30 ರಂದು ನಡೆಸಿದ ದಾಳಿಯಲ್ಲಿ ಪಾಲ್ಗೊಂಡಿದ್ದರು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ10 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ10 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

