ರಾಜಕೀಯ
ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಶಿವಮೊಗ್ಗದಲ್ಲಿ ಒಂದಾಗಲು ಅಸಾಧ್ಯ : ಕುಮಾರ್ ಬಂಗಾರಪ್ಪ
ಸುದ್ದಿದಿನ,ಶಿವಮೊಗ್ಗ :ಜಾತಿಯ ಆಟಗಳು ಇಲ್ಲಿ ನಡೆಯೋದಿಲ್ಲ. ಸಂಸಾರ ಹೊಡೆದು ಹಾಳು ಮಾಡಿದವರಿಗೆ ಕಳೆದ ಬಾರಿಯೇ ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಸೊರಬ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ಅವರು, ಜೆಡಿಎಸ್ ಅಭ್ಯರ್ಥಿಗೆ ಸಮಾಜದ ಮೇಲೆ ಕಾಳಜಿ ಇದ್ರೆ ಶರಾವತಿ ಡೆಂಟಲ್ ಕಾಲೇಜು ಆಸ್ತಿ ವಾಪಸ್ ಸಮಾಜಕ್ಕೆ ಕೊಡಲಿ. 87 ಎಕರೆಯನ್ನು ರಿಯಲ್ ಎಸ್ಟೇಟ್ ದಂಧೆ ಮಾಡಿಕೊಂಡಿದ್ದಾರೆ.ಸಮಾಜದ ಆಸ್ತಿ ಮಾರಿಕೊಂಡು ತಿಂದು ಹಾಕಿದ್ದಾರೆ ಎಂದು ಕಿಡಿಕಾರಿದರು.
ಎಸ್. ಬಂಗಾರಪ್ಪ ಕೇವಲ ಜೆಡಿಎಸ್, ಕಾಂಗ್ರೆಸ್ ನವರಿಗೆ ಸೀಮಿತವಲ್ಲ. ಮೊದಲು ಬಂಗಾರಪ್ಪ ಸಮಾಧಿ ಅಭಿವೃದ್ಧಿ ಮಾಡಿ. ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರು ಶಿವಮೊಗ್ಗ ಜಿಲ್ಲೆಯಲ್ಲಿ ಒಂದಾಗಲು ಸಾಧ್ಯವಿಲ್ಲ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ನಗರದ ಗುರುಕುಲ ವಸತಿಯುತ ಶಾಲೆಯ ಮಕ್ಕಳೊಂದಿಗೆ ಬೆರೆತು ತಮ್ಮ ಲೋಕಸಭಾ ಸದಸ್ಯತ್ವದ ಅನುಭವದ ಜೊತೆಗೆ ಶಿಕ್ಷಣದ ಮಹತ್ವ ತಿಳಿಸಿದರಲ್ಲದೇ ಸಮಾಜದ ಸೇವೆಯ ಅನುಭವವನ್ನು ನೀಡಿ ಸ್ಫೂರ್ತಿ ತುಂಬಿದರು.
ಇತ್ತೀಚಿಗೆ ನಗರದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಗುರುಕುಲ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕ ವೃಂದದವರೊಂದಿಗೆ ಭೇಟಿ ನೀಡಿ, ಸಂಸದರಾಗಿ ಆಯ್ಕೆಯಾಗಿದ್ದಕ್ಕೆ ಶುಭ ಕೋರಿದರಲ್ಲದೇ, ಕೆಲ ಸಮಯ ಅವರೊಂದಿಗೆ ಲೋಕಸಭಾ ಕ್ಷೇತ್ರದ ಸೇವೆಯ ಬಗ್ಗೆ ಮಾತುಕತೆ ನಡೆಸಿದರು.
ಪ್ರಭಾ ಮಲ್ಲಿಕಾರ್ಜುನ ಅವರು, ವಿದ್ಯಾರ್ಥಿಗಳು ತಮ್ಮ ಆಸಕ್ತಿಗಳನ್ನು ಅನುಸರಿಸಿ, ಸಮಾಜಕ್ಕೆ ಹಿತಕರವಾಗಿ ಕೊಡುಗೆ ನೀಡುವ ಮಹತ್ವವನ್ನು ವಿವರಿಸಿದರು. ಅವರು ಮಕ್ಕಳ ಹಲವು ಪ್ರಶ್ನೆಗಳಿಗೆ ಸಮಾಧಾನಕರ ಉತ್ತರಗಳನ್ನು ನೀಡಿದರು.
ಇದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮತ್ತು ಸಾಮಾಜಿಕ ಹೊಣೆಗಾರಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯನ್ನು ಹೊಂದಿದರು. ಇವರ ಮಾತುಗಳು ಪ್ರೋತ್ಸಾಹ ಮತ್ತು ಮಹತ್ವದ ಸಂದೇಶಗಳಿಂದ ತುಂಬಿದ್ದವು. ಅಲ್ಲದೇ ಮಕ್ಕಳಿಗೆ ಭವಿಷ್ಯದಲ್ಲಿ ಸ್ಫೂರ್ತಿಯಿಂದ ಉಜ್ವಲತೆಗೆ ಸಾಕ್ಷಿಯಾದವು.
ಓದುತ್ತಿರುವ ತರಗತಿಯ ಬಗ್ಗೆ ಎಲ್ಲ ಮಕ್ಕಳ ವಿಚಾರಿಸುತ್ತಾ, ಭವ್ಯ ಭವಿಷ್ಯದಲ್ಲಿ ಯಾವ ಸ್ಥಾನ ಇಚ್ಚಿಸುವಿರಾ ಎಂದು ಕೇಳುತ್ತಾ, ಶಿಕ್ಷಕ ವೃತ್ತಿಯೂ ಸಹ ಅಮೂಲ್ಯವಾಗಿದೆ. ಅಕ್ಷರ ಜ್ಞಾನ ನೀಡುವ ಕೆಲಸಕ್ಕೂ ಒತ್ತು ಕೊಡಬೇಕು. ಜನರ ಬಳಿಯೇ ಹೋಗಿ ಕಷ್ಟ, ನಷ್ಟಗಳ ವಿಚಾರಿಸಿ ಪರಿಹರಿಸುವುದೇ ನಿಜವಾದ ಸಮಾಜ ಸೇವೆ. ಅದುವೇ ಸಾಮಾಜಿಕ ನಾಯಕನ ಹೊಣೆಗಾರಿಕೆ. ಈ ರೀತಿ ನಿಮ್ಮ ಭವಿಷ್ಯದಲ್ಲೂ ಆಗಿ ಎಂದರು.
ಮಕ್ಕಳು ಸಂಸದರಾದ ಪ್ರಭಾ ಮಲ್ಲಿಕಾರ್ಜುನ ಅವರಿಗೆ ಸೆಲ್ಯೂಟ್ ಮೂಲಕ ಅವರ ಲೋಕಸಭಾ ಸ್ಥಾನ ಅಲಂಕರಿಸಿದ್ದಕ್ಕೆ ಹಾಗೂ ಅವರ ಸೇವೆಗೆ ಗೌರವ ಸೂಚಿಸಿದರು. ಇದಕ್ಕೆ ಪ್ರಭಾ ಮಲ್ಲಿಕಾರ್ಜುನ ತಾವೂ ಸೆಲ್ಯೂಟ್ ಮಾಡಿ ವಿದ್ಯಾರ್ಥಿಗಳಿಗೆ ಧನ್ಯವಾದ ತಿಳಿಸಿದರು. ಅಲ್ಲದೇ ವಿದ್ಯಾರ್ಥಿಗಳು ನೆನಪಿನ ಕಾಣಿಕೆಯಾಗಿ ಪ್ರಭಾ ಮಲ್ಲಿಕಾರ್ಜುನ ಭಾವಚಿತ್ರವುಳ್ಳ ಫೋಟೋ ನೀಡಿದರು.
ಈ ಸಂದರ್ಭದಲ್ಲಿ ಗುರುಕುಲ ವಸತಿಯುತ ಶಾಲೆ ಅಧ್ಯಕ್ಷ ಅಬ್ದುಲ್ ಆರ್., ಸಾನಿಯಾ ಜೆಹರ, ಶಿಕ್ಷಣ ಸಂಯೋಜಕರಾದ ಶ್ವೇತ.ಎಂ. ಹೆಚ್, ರೇಖಾ ಎಲ್. ಪಾಟೀಲ್, ಎಜಾಜ್ ಅಹ್ಮದ್, ಸಂದೀಪ್ ಪಿ., ಶಾಂತ ಡಿ.ಎಸ್., ರೇಖಾ ಎನ್.ಆರ್., ಸವಿತಾ ಕಾಟ್ವೆ, ಸಹ ಶಿಕ್ಷಕರಾದ ಬಸವರಾಜ್, ಸುಭಾಷ್ ಓ., ಸೈಯದ ಹಮೀಬಾ, ಸಾಯಿರಾ ಖಾನಮ್, ನೂರ್ ಜಹಾನ್, ಹಮೀದ ಬಾನು, ಹಾಗೂ ಗುರುಕುಲ ವಸತಿಯುತ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇನ್ನು ನಾಲ್ಕು ದಿನಗಳಲ್ಲಿ ಎರಡು ಕಂತಿನ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ
ಸುದ್ದಿದಿನಡೆಸ್ಕ್:ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ(ಅ 3)ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ”ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ ಹಾಕುವುದು ವಿಳಂಬವಾಗಿತ್ತು. ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ. ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ.
ಈ ಹೆಣ್ಣು ಮಗಳು ತುಂಬಾ ಕಿಲಾಡಿ, ಹಠ ಮಾಡಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವಂತಹ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಲೋಕಸಭಾ ಸದಸ್ಯರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಅವರು (ಅ.4) ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ವಿದ್ಯಾನಗರದಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಸಿಇಟಿ ಮತ್ತು ನೀಟ್ ಪರೀಕ್ಷೆ ತರಬೇತಿ ಕಾರ್ಯಕ್ರಮಕ್ಕೆ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ತನ್ನ ಭವಿಷ್ಯದ ಗುರಿಯನ್ನಿಟ್ಟುಕೊಂಡು ಆಶಾವಾದಿಗಳಾಗಬೇಕು. ಜೀವನದಲ್ಲಿ ಸಿಗುವಂತಹ ಅವಕಾಶಗಳನ್ನು ಸಂಪೂರ್ಣವಾಗಿ ಸದ್ಬಳಕೆ ಮಾಡಿಕೊಂಡರೆ, ತನ್ನ ಗುರಿ ಸಾಧನೆಯ ಹಾದಿ ಸುಗಮವಾಗುತ್ತದೆ. ಎಂದು ತಿಳಿಸಿದರು.
ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ, ಪೋಷಕರೊಂದಿಗೆ ಹಾಗೂ ಸಮಾಜದೊಂದಿಗೆ ಉತ್ತಮ ಭಾಂದವ್ಯವನ್ನು ಬೆಳೆಸಿಕೊಂಡು ಸಂಬಂಧಗಳ ಮಹತ್ವಗಳನ್ನು ಅರಿತು ಅವುಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಲಿಕೆಯ ಎಲ್ಲ ಹಂತಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಪರಿಪೂರ್ಣ ವಿದ್ಯಾರ್ಥಿ ಎಂದು ಎನಿಸಿಕೊಳ್ಳಲು ಸಾಧ್ಯ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾವುದೇ ವಿಷಯಗಳನ್ನು ನಿರ್ಲಕ್ಷ್ಯ ಮಾಡದೇ ಪ್ರತಿಯೊಂದು ವಿಷಯವು ಉಪಯುಕ್ತ ಎನ್ನುವ ಭಾವನೆಯೊಂದಿಗೆ ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಯತ್ನಿಸಬೇಕಿದೆ ಎಂದು ತಿಳಿಸಿ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿμï ಕಲಿಕೆ, ಕಂಪ್ಯೂಟರ್ ಜ್ಞಾನದ ಜೊತೆಗೆ ಶಿಸ್ತು ಬೆಳೆಸಿಕೊಂಡರೆ ಮಾತ್ರ ಜೀವನದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಮಾತನಾಡಿ ವಿದ್ಯಾರ್ಥಿಗಳು ಏನು ಓದಬೇಕು, ಯಾವಾಗ ಓದಬೇಕು, ಏನ್ ಮಾಡಬೇಕು ಎಂಬ ಸ್ವಂತ ಚಿಂತನೆಗಳನ್ನು ರೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳ ತಂದೆ, ತಾಯಿಗಳು ಕಷ್ಟಪಟ್ಟು ದುಡಿದು ನಿಮಗೆ ವಿದ್ಯಾಭ್ಯಾಸ ಕಲಿಯಲು ಕಳುಹಿಸುತ್ತಿರುತ್ತಾರೆ. ಅದರ ಫಲವಾಗಿ ನೀವು ಅವರಿಗೆ ನಿಮ್ಮ ಸಾಧನೆಯ ಮೂಲಕ ಗೌರವ ತರಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್ ಮಾತನಾಡಿ ಈ ತರಬೇತಿಯು 90 ದಿನಗಳ ಕಾಲ ನಡೆಯಲಿದ್ದು. ಪ್ರತಿದಿನ 2 ಗಂಟೆಯಂತೆ ಐದು ದಿನ ತರಗತಿಗಳನ್ನು ನಡೆಸಲಾಗುತ್ತದೆ. ಜೊತೆಗೆ 19 ವರ್ಷ ಹಿಂದಿನ ಪ್ರಶ್ನೋತ್ತರಗಳನ್ನು ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ನೀಡಲಾಗುವುದು ಎಂದು ತಿಳಿಸಿದರು.
ಸರ್ಕಾರಿ ಕಾಲೇಜಿನಲ್ಲಿರುವಂತಹ ಅಧ್ಯಾಪಕರು ಬೋರ್ಡ್ ಪರೀಕ್ಷೆ ಬಗ್ಗೆ ಹೆಚ್ಚು ಅಧ್ಯಯನ ಮಾಡಿಸುತ್ತಾರೆ, ಹಾಗೆಯೇ ಖಾಸಗಿ ಸಂಸ್ಥೆ ಅಧ್ಯಾಪಕರು ಸಿಇಟಿ ಮತ್ತು ನೀಟ್ ಪರೀಕ್ಷೆ ಬಗ್ಗೆ ಉಪನ್ಯಾಸ ನೀಡುತ್ತಾರೆ ಎಂದು ತಿಳಿಸಿದರು.
ಜಿಲ್ಲಾ ಅಧೀಕ್ಷಕರಾದ ಉಮಾ ಪ್ರಶಾಂತ್ ಮಾತನಾಡಿ ಭವಿಷ್ಯ ನಿಮ್ಮ ಕೈಯಲ್ಲಿದೆ, ಆದ್ದರಿಂದ ಕಲಿಯುವ ಸಮಯದಲ್ಲಿ ಗಮನವಿಟ್ಟು ಶ್ರದ್ಧೆಯಿಂದ ಕಲಿತು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಿಗರೇಟ್, ತಂಬಾಕು ಇಂತಹ ದುಶ್ಚಟಗಳಿಂದ ದೂರವಿರಬೇಕು, ಕಾಲೇಜುಗಳಲ್ಲಿ ಯಾರಾದರೂ ಸಿಗರೇಟ್, ತಂಬಾಕು ಬಳಸುವುದು ಕಂಡುಬಂದಲ್ಲಿ ಅಂತವರ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ಮತ್ತು ಪೋಲೀಸರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಇದೆ ವೇಳೆ ಯೂಟ್ಯೂಬ್ ಚಾನೆಲ್ ಗೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಬುಕ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಮಹಾಪೌರರಾದ ಚಮನ್ ಸಾಬ್ , ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕರಿಸಿದ್ದಪ್ಪ, ಖಾಸಗಿ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಸಂಘದ ಅಧ್ಯಕ್ಷರಾದ ಶ್ರೀಧರ್, ಕಾರ್ಯದರ್ಶಿ ಡಾ.ಜಯಂತ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ ವಾಮದೇವಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಾಯತ್ರಿ ಹಾಗೂ ವಿವಿಧ ಅಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಎಂಬ್ರಾಯ್ಡರಿ ಮತ್ತು ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಗನ್ ಮಿಸ್ ಫೈರ್ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
-
ದಿನದ ಸುದ್ದಿ6 days ago
ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
-
ದಿನದ ಸುದ್ದಿ7 days ago
ದಿವಾಕರ. ಡಿ ಮಂಡ್ಯ ಅವರಿಗೆ ಪಿ ಎಚ್ ಡಿ ಪದವಿ
-
ದಿನದ ಸುದ್ದಿ6 days ago
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
-
ದಿನದ ಸುದ್ದಿ6 days ago
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಜನ್ಮದಿನ ; ದೇಶದೆಲ್ಲೆಡೆ ಸ್ಮರಣೆ
-
ದಿನದ ಸುದ್ದಿ7 days ago
ಚಿನ್ನದ ಬೆಲೆ ಇಳಿಕೆ