ದಿನದ ಸುದ್ದಿ
15 ಕೋಟಿ ರೂ. ವೆಚ್ಚದಲ್ಲಿ ಕುಂದವಾಡ ಕೆರೆ ಅಭಿವೃದ್ಧಿ ಕಾಮಗಾರಿಗೆ ಸಂಸದರಿಂದ ಚಾಲನೆ
ಸುದ್ದಿದಿನ,ದಾವಣಗೆರೆ: ದಾವಣಗೆರೆ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಲು ಬಳಸಲಾಗುವ ಇಲ್ಲಿನ ಕುಂದವಾಡ ಕೆರೆಯನ್ನು ಸ್ಮಾರ್ಟ್‍ಸಿಟಿ ಯೋಜನೆಯಡಿ 15 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸುವ ಕಾಮಗಾರಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಶನಿವಾರ ಕುಂದವಾಡ ಕೆರೆ ಬಳಿ ಚಾಲನೆ ನೀಡಿದರು.
15 ಕೋಟಿ ರೂ. ವೆಚ್ಚದಲ್ಲಿ ಕುಂದವಾಡ ಕೆರೆಯನ್ನು ಅಭಿವೃದ್ಧಿಗೊಳಿಸುವ ಕಾಮಗಾರಿ ಕುರಿತು ವಿವರಣೆ ನೀಡಿದ ಸ್ಮಾರ್ಟ್‍ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಅವರು, ಕುಂದವಾಡ ಕೆರೆಯು ದಾವಣಗೆರೆ ನಗರದ ಕುಡಿಯುವ ನೀರಿನ ಪ್ರಮುಖ ಸಂಗ್ರಹಗಾರವಾಗಿದ್ದು, ಇತ್ತೀಚಿನ ದಿನಗಳಲ್ಲಿ ಕುಂದವಾಡ ಕೆರೆಯ ಏರಿಯ ಮೇಲೆ ಮತ್ತು ಕೆರೆಯಲ್ಲಿ ಬೆಳೆದಿರುವ ಸಾಕಷ್ಟು ಕಳೆ, ಹೂಳು ಇತ್ಯಾದಿಗಳಿಂದ ಬೇಸಿಗೆಯಲ್ಲಿ ನೀರು ಹಸಿರು ಬಣ್ಣಕ್ಕೆ ತಿರುಗಿ ಉಪಯೋಗಿಸಲು ಸಾಧ್ಯವಾಗುತ್ತಿಲ್ಲ, ಅಲ್ಲದೆ, ಕೆರೆಯ ಮುಖ್ಯ ಏರಿಯಲ್ಲಿ ನೀರು ಸೋರಿಕೆಯಾಗುತ್ತಿತ್ತು, ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಕೆರೆಯ ಒಟ್ಟು 4.90 ಕಿ.ಮೀ. ಉದ್ದದ ಏರಿಯನ್ನು ಅಭಿವೃದ್ಧಿಪಡಿಸಲಾಗುವುದು.
ಕೆರೆ ಏರಿ ಆವರಣದಲ್ಲಿ ಬೆಳೆದಿರುವ ಪೊದೆ, ಮುಳ್ಳನ್ನು ತೆರವುಗೊಳಿಸಿ, ಕೆರೆ ಏರಿಯನ್ನು ಎತ್ತರಿಸಲಾಗುವುದು ಅಲ್ಲದೆ ವಿಸ್ತರಿಸಲಾಗುವುದು. ಕೆರೆಯ ಒಳಮುಖದ ಇಳಿಜಾರಿನ ರಕ್ಷಣಾ ಕಾರ್ಯ ಕೈಗೊಳ್ಳಲಾಗುವುದು. ಪಾದಚಾರಿಗಳ ವಾಕಿಂಗ್ ಪಥ ರಚಿಸಿ, ಸುಧಾರಿಸಲ”ಆಗುವುದು. ಆರ್ಕಿಟೆಕ್ಚರಲ್ ಫೆನ್ಸಿಂಗ್ ಮಾಡಲಾಗುವುದು.
ಸಾಧರಹಳ್ಳಿ ಕಲ್ಲಿನ ಆಸನಗಳು ಮತ್ತು ಇತರೆ ಅಲಂಕಾರಿಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಸ್ಥಿರವಾದ ಪಾಲಿಥಿಲಿನ್ ಡಸ್ಟ್‍ಬಿನ್‍ಗಳ ಅಳವಡಿಕೆ, ವಿದ್ಯುತ್ ಕಂಬ ಹಾಗೂ ದೀಪಗಳನ್ನು ಅಳವಡಿಸುವಂತಹ ಅಭಿವೃದ್ಧಿ ಕಾಮಗಾರಿ ನಡೆಸಲಾಗುವುದು. ಕಾಮಗಾರಿ ಪೂರ್ಣಗೊಳಿಸಲು ಒಂದು ವರ್ಷದ ಕಾಲಮಿತಿ ನಿಗದಿಪಡಿಸಲಾಗಿದೆ ಎಂದರು.
ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಮಾತನಾಡಿ, ಕುಂದವಾಡ ಕೆರೆ ಏರಿಗೆ ಬೆಳಿಗ್ಗೆ ಹಾಗೂ ಸಂಜೆಯ ಅವಧಿಯಲ್ಲಿ ಸಾಕಷ್ಟು ಜನ ವಾಯುವಿಹಾರಕ್ಕೆ ಬರುತ್ತಾರೆ. ಇಲ್ಲಿನ ವಾತಾವರಣ ಆಹ್ಲಾದಕರವಾಗಿರಬೇಕು, ವಾಯುವಿಹಾರಿಗಳಿಗೆ ಅನುಕೂಲವಾಗುವಂತೆ ನೋಡಿಕೊಳ್ಳಿ ಎಂದರು.
ಶಾಸಕ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.
“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.
ಶ್ರೀ ಎ. ಜಯಪ್ಪ ಅವರು ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.
ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ4 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ4 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ6 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ4 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ3 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ2 days agoಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

