ದಿನದ ಸುದ್ದಿ

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಮೇ.15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version