ದಿನದ ಸುದ್ದಿ

ದಾವಣಗೆರೆ | ಜನವರಿ 6ರಂದು ಹೈಸ್ಕೂಲ್ ಮೈದಾನದಲ್ಲಿ ಕುರುಬರ ಎಸ್ಟಿ ಸಮಾವೇಶ

Published

on

ಸುದ್ದಿದಿನ,ದಾವಣಗೆರೆ ; ಕುರುಬ ಜನಾಂಗದ ಎಸ್ಟಿ ಮೀಸಲಾತಿ ಹೋರಾಟದ ಬೃಹತ್ ಸಮಾವೇಶಕ್ಕೆ ಅನುಮತಿ‌ ಕೋರಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರಿಗೆ ಎಸ್ಟಿ ಹೋರಾಟ ಸಮಿತಿ ಮನವಿ ಸಲ್ಲಿಸಿತು.

ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಬೇಡಿಕೆ ಇಟ್ಟುಕೊಂಡು 2021 ಜನವರಿ 6 ರಂದು ಮಧ್ಯ ಕರ್ನಾಟಕ ದಾವಣಗೆರೆಯಲ್ಲಿ ದಾವಣಗೆರೆ, ಚಿತ್ರದುರ್ಗ, ಹಾವೇರಿ ಭಾಗದ ಬೃಹತ್ ಸಮಾವೇಶ ಹಮ್ಮಿಕೊಂಡಿರುವ ಪ್ರಯುಕ್ತ ಸಮಾವೇಶಕ್ಕೆ ನಗರದ ಹೈಸ್ಕೂಲ್ ಮೈದಾನವನ್ನು ಆಯ್ಕೆ ಮಾಡಿದ್ದು, ಈ ಹಿನ್ನಲೆ ಅನುಮತಿ ಕೋರಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರಿಗೆ ಎಸ್ಟಿ ಹೋರಾಟ ಸಮಿತಿ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿ.ಪಂ ಸದಸ್ಯ ಜೆಸಿ ನಿಂಗಪ್ಪ, ಮಾಜಿ ಮೇಯರ್ ಹೆಚ್ ಎನ್ ಗುರುನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್ ಜಿ ಗಣೇಶಪ್ಪ, ಶಿವಣ್ಣ ಮೇಸ್ಟ್ರು, ಕರಿಗಾರ್ ಮಂಜುನಾಥ್ ಸೇರಿದಂತೆ ಮತ್ತಿತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version