ದಿನದ ಸುದ್ದಿ
ಕುವೆಂಪು ವಿರಚಿತ ನಾಡಗೀತೆ ವಿಕೃತಗೊಳಿಸಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ; ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜನೆ ; ಸಿಎಂ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಕೆಲವು ಪಠ್ಯಪುಸ್ತಕಗಳಲ್ಲಿ ಹಲವು ಆಕ್ಷೇಪಾರ್ಹ ಅಂಶಗಳು ಇದ್ದ ಕಾರಣ ಸಮಾಜ ವಿಜ್ಞಾನ ಹಾಗೂ ಕನ್ನಡ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಪಠ್ಯ ಪುಸ್ತಕಗಳ ಅಲ್ಪ ಪರಿಷ್ಕರಣೆಯನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀ ಶ್ರೀ ಶ್ರೀ ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಣೆಗಳನ್ನು ಮಾಡಿರುತ್ತಾರೆ, ಬಸವಣ್ಣನವರ ಇದೇ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ. ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶವನ್ನು ಯಾರ ಭಾವನೆಗೂ ಧಕ್ಕೆ ಆಗದಂತೆ ಪರಿಷ್ಕರಿಸಲಾಗುವುದು.
ಆದಿಚುಂಚನಗಿರಿ ಪೀಠದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು ಹಾಗೂ ಇತರರ ಆಶಯದಂತೆ: ರಾಷ್ಟ್ರಕವಿ ಕುವೆಂಪುರವರು ವಿರಚಿತ ನಾಡಗೀತೆಯನ್ನು ವಿಕೃತಗೊಳಿಸುವ ರೀತಿಯಲ್ಲಿ ನಾಡಗೀತೆಯ ದಾಟಿಯಲ್ಲಿ ಮೂಲ ಕವನವನ್ನು ಬರೆದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸೈಬರ್ ಕ್ರೈಮ್ ಬೆಂಗಳೂರು ಇವರಿಗೆ ತನಿಖೆಯನ್ನು ನಡೆಸಲು ಸೂಚಿಸಲಾಗಿದೆ.
ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧಿಸಿದಂತೆ ಬಂದಿರುವ ಆರೋಪ / ಅಕ್ಷೇಪಣೆಗಳಿಗೆ ಸ್ಪಷ್ಟಿಕರಣಗಳನ್ನು ಒಳಗೊಂಡ ಟಿಪ್ಪಣಿ ಲಗತ್ತಿಸಿದೆ. ಹಲವಾರು ಅಂಶಗಳಿಗೆ ವಾಸ್ತವ ಅಂಶಗಳಿಂದ ಸ್ಪಷ್ಟಿಕರಣವನ್ನು ಕೊಡಲಾಗಿದೆ. ಪ್ರಸ್ತುತ ಅಕ್ಷೇಪ ಮಾಡಿರುವಂತೆ ಮಹಾನ್ ವ್ಯಕ್ತಿಗಳ ಯಾವುದೇ ಪಾಠವನ್ನು ಕೈಬಿಡಲಾಗಿಲ್ಲ ಎಂದು ತಿಳಿಸಿದ್ದಾರೆ.
ಈ ಕೆಳಕಂಡ ನಿರ್ಧಾರವನ್ನು ಸರ್ಕಾರವು ತೆಗೆದುಕೊಂಡಿದೆ
- ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದೆ.
- ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವಾದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರವು ಹೊಂದಿದೆ, ಈ ಹಿನ್ನೆಲೆಯಲ್ಲಿ ಮೇಲೆ ತಿಳಿಸಿದಂತೆ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧಾರ ಮಾಡಲಾಗಿದೆ.
- ರಾಷ್ಟ್ರಕವಿ ಕುವೆಂಪುರವರ ನಾಡಗೀತೆಯನ್ನು ಆಕ್ಷೇಪಾರ್ಹವಾಗಿ ವಿಕೃತಿಗೊಳಿಸಿದ ಅಂಶವು ಪಠ್ಯಪುಸ್ತಕಗಳಲ್ಲಿ ಉಲ್ಲೇಖಗೊಳ್ಳದಿದ್ದರೂ, ಇದರ ಮೂಲಕವನ ಬರೆದ ವ್ಯಕ್ತಿಗಳ ಬಗ್ಗೆ ಕಾನೂನಾತ್ಮಕ ತನಿಖೆಯ ಕ್ರಮವನ್ನು ಸರ್ಕಾರವು ತೆಗೆದುಕೊಂಡಿದೆ.
- ಪ್ರೊ.ಬರಗೂರು ರಾಮಚಂದ್ರಪ್ಪರವರ ಅಧ್ಯಕ್ಷತೆಯ ಸಮಿತಿಯು ರಚಿಸಿದ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ರಾಷ್ಟ್ರಕವಿ ಕುವೆಂಪುರವರ ಕುರಿತಾದ 7 (ಏಳು) ಗದ್ಯ/ಪದ್ಯಗಳಿಗೆ ಸೀಮಿತವಾಗಿದ್ದನ್ನು, ಪ್ರಸ್ತುತ ಪರಿಷ್ಕರಣಾ ಸಮಿತಿ ರಚಿಸಿರುವ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ 10 (ಹತ್ತು) ಕ್ಕೇರಿಸಿದ.
- ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ನಾಡಪ್ರಭು ಕೆಂಪೇಗೌಡರ ಕುರಿತಾದ ಪಾಠವನ್ನು ಹೊಸದಾಗಿ ಸೇರ್ಪಡೆ ಮಾಡಿದೆ.
- ಈ ಹಿಂದಿನ ಪಠ್ಯಪುಸ್ತಕಗಳಲ್ಲಿ ಪರಿಚಯಿಸಲಾಗಿದ್ದ ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜೊತೆ ಹಿಂದೂ ಧರ್ಮದ ವಿಷಯವನ್ನೂ ಸೇರ್ಪಡೆ ಮಾಡಿ ಪರಿಚಯಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
ಸುದ್ದಿದಿನ,ದಾವಣಗೆರೆ: ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು ಈ ಬಸ್ ನಿಲ್ದಾಣವು ಸುಸಜ್ಜಿತ ಹಾಗೂ ಹಲವು ಸೌಲಭ್ಯಗಳನ್ನು ಹೊಂದಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಅವರು (07) ರಂದು ಪಿ.ಬಿ ರಸ್ತೆಯಲ್ಲಿನ ಡಾ. ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಈ ಬಸ್ ನಿಲ್ದಾಣ ಸ್ಮಾರ್ಟ್ ಸಿಟಿ’ ಯೋಜನೆಯಡಿ 20 ಕೋಟಿ ವೆಚ್ಚದಲ್ಲಿ ಸಿದ್ದಗೊಂಡು, ಈಚೆಗಷ್ಟೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರುವ ಈ ಬಸ್ ನಿಲ್ದಾಣವು ಸುಸಜ್ಜಿತವಾಗಿದ್ದು, ಹತ್ತಾರು ಸೌಲಭ್ಯಗಳನ್ನು ಹೊಂದಿದೆ. 84 ಮಳಿಗೆ ಹಾಗೂ ಏಕಾಲಕ್ಕೆ 16 ಬಸ್ ನಿಲ್ಲಿಸಬಹುದಾಗಿದೆ. 200 ದ್ವೀಚಕ್ರ ವಾಹನ ನಿಲುಗಡೆಗೆ ಕೂಡ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸುಸಜ್ಜಿತ ಬಸ್ ನಿಲ್ದಾಣವನ್ನು ದಾವಣಗೆರೆ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಯಿತು. ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್, ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಉಪಮೇಯರ್ ಸೋಗಿ ಶಾಂತಕುಮಾರ್, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಮಲ್ಲೇಶಪ್ಪ, ಖಾಸಗಿ ಬಸ್ ಏಜೆಂಟರ ಸಂಘದ ಅಧ್ಯಕ್ಷರಾದ ಉಮೇಶ್‍ರಾವ್ ಸಾಳಂಕಿ, ಹಾಗೂ ದಾವಣಗೆರೆ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳು, ಖಾಸಗಿ ಬಸ್ ಏಜೆಂಟ್ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಜಂಟಿ ನಿರ್ದೇಶಕಾರಾದ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಸತಿ ಯೋಜನೆ ; ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶಿಥಿಲವಾಗಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ವಾಜಪೇಯಿ ವಸತಿ ಯೋಜನೆಯಡಿ ಸಾಮಾನ್ಯದಡಿ 177 ಮನೆಗಳು ಲಬ್ಯವಿದ್ದು ಸಹಾಯಧನವಾಗಿ ರೂ.2.70 ಲಕ್ಷ ಮತ್ತು ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಪರಿಶಿಷ್ಟ ಪಂಗಡದ 18 ಮನೆಗಳು ಲಭ್ಯವಿದ್ದು ರೂ.3.50 ಲಕ್ಷ ಸಹಾಯಧನ ನೀಡಲಾಗುತ್ತದೆ.
ಆಸಕ್ತರು ಗಂಡ, ಹೆಂಡತಿ ಇಬ್ಬರ ಆಧಾರ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪತ್ರ, ಬ್ಯಾಂಕ್ ಪಾಸ್ ಬುಕ್, ಚಾಲ್ತಿ ಇ-ಸ್ವತ್ತು, ಇಸಿ ನಕಲು, 2 ಭಾವಚಿತ್ರ ಪ್ರತಿಯೊಂದಿಗೆ ಪಾಲಿಕೆಯಲ್ಲಿ ಅರ್ಜಿ ಸಲ್ಲಿಸಲು ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಎಂಬ್ರಾಯ್ಡರಿ ಮತ್ತು ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
-
ದಿನದ ಸುದ್ದಿ6 days ago
ಗನ್ ಮಿಸ್ ಫೈರ್ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
-
ದಿನದ ಸುದ್ದಿ6 days ago
ದಿವಾಕರ. ಡಿ ಮಂಡ್ಯ ಅವರಿಗೆ ಪಿ ಎಚ್ ಡಿ ಪದವಿ
-
ದಿನದ ಸುದ್ದಿ6 days ago
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
-
ದಿನದ ಸುದ್ದಿ5 days ago
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಜನ್ಮದಿನ ; ದೇಶದೆಲ್ಲೆಡೆ ಸ್ಮರಣೆ
-
ದಿನದ ಸುದ್ದಿ6 days ago
ಈ ದಿನ ಅಂತರಾಷ್ಟ್ರೀಯ ಹಿರಿಯ ನಾಗರಿಕರ ದಿನ