ದಿನದ ಸುದ್ದಿ

ಭೂ ಒಡೆತನ ಯೋಜನೆ : ಮಹಿಳೆಯರಿಂದ ಅರ್ಜಿ ಆಹ್ವಾನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬಳ್ಳಾರಿ : ಕರ್ನಾಟಕ ಮಹಿರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಪರಿಶಿಷ್ಟ ಪಂಗಡ ಜನಾಂಗದ ಭೂ ರಹಿತ ಕೃಷಿ ಕಾರ್ಮಿಕ ಕುಟುಂಬದ ಮಹಿಳೆಯರಿಗೆ ಸಿರಗುಪ್ಪ ತಾಲ್ಲೂಕಿನ ಚಿಕ್ಕಬಳ್ಳಾರಿ, ಶ್ರೀಧರಗಡ್ಡೆ, ಅಗಸನೂರು, ಮಿಟ್ಟೆಸೂಗೂರು, ಬೊಮ್ಮಲಾಪುರ, ಗ್ರಾಮಗಳಲ್ಲಿ ಜಮೀನುಗಳನ್ನು ಖರೀದಿಸಿ ವಿತರಿಸುವುದಕ್ಕೆ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿದಾರರು ಗ್ರಾಮದಿಂದ 10ಕಿ.ಮೀ. ಸುತ್ತಳತೆಯ ಒಳಗೆ ವಾಸವಿರಬೇಕು. ಪರಿಶಿಷ್ಟ ಪಂಗಡ ಜನಾಂಗದ ಭೂ ರಹಿತ ಕಾರ್ಮಿಕ ಕುಟುಂಬದವರಾಗಿರಬೇಕು. ಅರ್ಜಿಯನ್ನು ನ.19ರೊಳಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ವಾರ್ಡ್ ನಂ.30, ತಿಲಕನಗರ, ಕಂಟೋನ್ಮೆಂಟ್, ಬಳ್ಳಾರಿ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಕಚೇರಿಯ ದೂ.ಸಂ. 08392-245551ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version