/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಗದ್ದಲ; ಗುಂಪು ಚದುರಿಸಲು ಲಾಠಿ ಪ್ರಹಾರ

Published

on

ಸುದ್ದಿದಿನ ಬೆಂಗಳೂರು: ಶಬರಿಮಲೈ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮಹಿಳಾ ಪ್ರವೇಶ ಕುರಿತಂತೆ ಗದ್ದಲ ಮತ್ತೆ ಶುರುವಾಗಿದ್ದು, ದೇಗುಲದೊಳಗೆ ಪ್ರವೇಶ ನೀಡಲು ಪ್ರತ್ಯೇಕ ದಾರಿ, ಸೂಕ್ತ ಪೊಲೀಸ್ ಬಂದೋಬಸ್ತ್ ನಿಡಲಾಗಿದೆ. ಇತ್ತ ಇದನ್ನು ವಿರೋಧಿಸಿ ಕೆಲ ಹಿಂದುಪರ ಸಂಘಟನೆಗಳು ಪ್ರತಿಭಟನೆಗೆ ಇಳಿದಿವೆ. ಈ ಕಾರಣಕ್ಕೆ ಶಬರಿಮಲೈಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ದೇಗುಲದೊಳಗೆ ಮಹಿಳೆಯರಿಗೆ ಪ್ರವೇಶ ಕುರಿತಂತೆ ಸುಪ್ರೀಂ ಕೋರ್ಟ್ ಐತೀರ್ಪು ನೀಡಿದ ಬಳಿಕ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶ ಈಗ ತೆರೆದುಕೊಂಡಿದೆ. ಸುಪ್ರೀಂ ಕೋರ್ಟ್ ತೀರ್ಪು ನೀಡಿದಾಗಲೂ ತೀವ್ರ ವಿರೋಧ ವ್ಯಕ್ತವಾಗಿತ್ತು.

ಈಗ ಮಹಿಳೆಯರನ್ನು ದೇಗುಲದೊಳಗೆ ಬಿಡದಂತೆ ಹಿಂದುಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಕೇರಳ ರಾಜ್ಯದಲ್ಲಿ ಅಹಿತಕರ ಘಟನೆ ನಡೆಯದಂತೆ ನಿಗಾ ಇಡಲು ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ.  ಈಗಾಗಲೇ 16 ಮಂದಿಯನ್ನು ಬಂಧಿಸಲಾಗಿದೆ.

Trending

Exit mobile version