ದಿನದ ಸುದ್ದಿ

ದಾವಣಗೆರೆ | ನಾಳೆ ಸಚಿವ ಲಕ್ಷ್ಮಣ ಸವದಿ ಜಿಲ್ಲಾ ಪ್ರವಾಸ

Published

on

ಸುದ್ದಿದಿನ,ದಾವಣಗೆರೆ: ಉಪ ಮುಖ್ಯಮಂತ್ರಿಗಳು ಸಾರಿಗೆ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಇವರು ಮೇ 27 ರಂದು ದಾವಣಗೆರ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಿಗ್ಗೆ 08 ಕ್ಕೆ ರಸ್ತೆ ಮೂಲಕ ಬೆಳಗಾವಿಯಿಂದ ಹೊರಟು ಬೆಳಿಗ್ಗೆ 11 ಗಂಟೆಗೆ ದಾವಣಗೆರೆಗೆ ಆಗಮಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸುವರು.

ಮಧ್ಯಾಹ್ನ 03 ಗಂಟೆಗೆ ದಾವಣಗೆರೆಯಿಂದ ರಸ್ತೆ ಮೂಲಕ ಹೊರಟು ರಾತ್ರಿ 07 ಗಂಟೆಗೆ ಬೆಂಗಳೂರು ತಲುಪುವರು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version