ದಿನದ ಸುದ್ದಿ

ಚರ್ಮವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ

Published

on

ಸುದ್ದಿದಿನ,ದಾವಣಗೆರೆ : ಲಿಡ್‍ಕರ್ ನಿಗಮದಿಂದ ಚರ್ಮವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಗರದ ಎವಿಕೆ ಕಾಲೇಜು ರಸ್ತೆಯ ರಂಗಮಹಲ್ ನಲ್ಲಿ ಏರ್ಪಡಿಸಲಾಗಿದೆ.

ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಅಪ್ಪಟ ಚರ್ಮದ ಪಾದರಕ್ಷೆ, ಶೂ, ಬೆಲ್ಟ್, ಪರ್ಸ್, ಮಹಿಳೆಯರ ಪರ್ಸ್, ವ್ಯಾನಟಿ ಬ್ಯಾಗ್‍ಗಳು ಲಭ್ಯವಿದ್ದು, ಉತ್ಪನ್ನಗಳ ಮಾರಾಟ ದರದಲ್ಲಿ ಶೇ. 20 ರಷ್ಟು ರಿಯಾಯಿತಿ ಇದೆ.

ಮಾರಾಟ ಮೇಳವು ಏ. 09 ರವರೆಗೆ ನಿತ್ಯ ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ ನಡೆಯಲಿದೆ. ಮಾಹಿತಿಗೆ ಮೊ. 9480886275 ಸಂಪರ್ಕಿಸಬಹುದು ಎಂದು ನಿಗಮದ ವ್ಯವಸ್ಥಾಪಕ ಹಾಗೂ ಜಿಲ್ಲಾ ಸಂಯೋಜಕ ಎ.ಎಸ್. ರುದ್ರೇಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version