ದಿನದ ಸುದ್ದಿ

ಮತದಾನ ಮಾಡಲು ವೇತನ ಸಹಿತ ರಜೆ

Published

on

ಸುದ್ದಿದಿನ ಡೆಸ್ಕ್ : ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಬೇಕೆಂದು ಮಾಲೀಕರಿಗೆ ಕಾರ್ಮಿಕ ಇಲಾಖೆ ಸೂಚಿಸಿದೆ.

ಅಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅರ್ಹ ಕಾರ್ಮಿಕ ಮತದಾರರಿಗೆ ವೇತನ ಸಹಿತ ರಜೆ ನೀಡಬೇಕು, ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆಗೆ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಕಾರ್ಮಿಕ ಇಲಾಖೆ ಆಯುಕ್ತರ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version