ದಿನದ ಸುದ್ದಿ

ಕಳಪೆ ಬಿತ್ತನೆ ಬೀಜ ಮತ್ತು ನಕಲಿ ರಸಗೊಬ್ಬರ ಪೂರೈಸುವ ಮಾರಾಟಗಾರರ ವಿರುದ್ಧ ಕಾನೂನು ಕ್ರಮ : ಸಚಿವ ಭೈರತಿ ಬಸವರಾಜ್

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಕಳಪೆ ಬಿತ್ತನೆ ಬೀಜ ಮತ್ತು ನಕಲಿ ರಸಗೊಬ್ಬರ ಪೂರೈಸುವ ಮಾರಾಟಗಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಗರಾಭಿವೃದ್ಧಿ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದಾವಣಗೆರೆಯಲ್ಲಿ ಬುಧವಾರ ಮಾತನಾಡಿದ ಅವರು, ರಾಜ್ಯದಲ್ಲಿ ಕೃಷಿ ಚಟುವಟಿಕೆಗಳು ಈಗಾಗಲೇ ಆರಂಭಗೊಂಡಿದ್ದು, ರೈತರ ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜ, ರಸಗೊಬ್ಬರ ಒದಗಿಸುವುದು ಅಧಿಕಾರಿಗಳ ಹೊಣೆಯಾಗಿದೆ ಎಂದರು.

ನಿರಂತರ ಮಳೆಯಿಂದಾಗಿರುವ ಬೆಳೆಹಾನಿ ಸಮೀಕ್ಷಾ ವರದಿ ಸರ್ಕಾರದ ಕೈ ಸೇರಿದ್ದು, ಶೀಘ್ರದಲ್ಲಿಯೇ ರೈತರಿಗೆ ಪರಿಹಾರ ವಿತರಣೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version