ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; ಜೂನ್ 13 ರಂದು ಮತದಾನ
ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭೆಯಿಂದ ವಿಧಾನ್ ಪರಿಷತ್‌ನ 11 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ.
ಜೂನ್ 13 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅದೇ ದಿನ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.
ವಿಧಾನ ಪರಿಷತ್ ಸದಸ್ಯರಾದ ಅರವಿಂದ್ ಕುಮಾರ್ ಅರಳಿ, ಎನ್.ಎಸ್.ಬೋಸರಾಜು, ಕೆ.ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಮುನಿರಾಜು ಗೌಡ, ಕೆ.ಪಿ.ನಂಜುಂಡಿ, ಬಿ.ಎಂ.ಫಾರುಖ್, ರಘನಾಥ್ ರಾವ್ ಮಲ್ಕಾಪುರೆ, ಎನ್.ರವಿಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್ ಕುಮಾರ್ ಇದೇ ಜೂನ್ 17 ರಂದು ನಿವೃತ್ತಿ ಹೊಂದಲಿದ್ದಾರೆ.
ಇದೇ 27 ರಂದು ಅಧಿಸೂಚನೆ ಹೊರಬೀಳಲಿದೆ. ಜೂನ್ 3 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಜೂನ್ 4 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243