ದಿನದ ಸುದ್ದಿ

ಶಿಕ್ಷಣ ಸಂಸ್ಥೆಗಳು ವೈಚಾರಿಕತೆ ಮತ್ತು ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಾಗಲಿ : ರಾಘು ದೊಡ್ಡಮನಿ

Published

on

ಸುದ್ದಿದಿನ,ಚನ್ನಗಿರಿ:ಸಮಾಜದಲ್ಲಿ ಹೆಚ್ಚು ಬದಲಾವಣೆ ತರಬಹುದಾದ ಬಹುದೊಡ್ಡ ಜವಾಬ್ದಾರಿ ಹೊಂದಿರುವ ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಮಕ್ಕಳ ಮೂಲಕ ಜನ ಸಮುದಾಯಕ್ಕೆ ವೈಚಾರಿಕತೆ ಮತ್ತು ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಂತೆ ಕೆಲಸ ಮಾಡಬೇಕು ಎಂದು ಬಂಧುತ್ವ ಫೌಂಡೇಶನ್ ನ ಅಧ್ಯಕ್ಷರಾದ ರಾಘು ದೊಡ್ಡಮನಿ ಅಭಿಪ್ರಾಯ ಪಟ್ಟರು.

ಚನ್ನಗಿರಿ ಪಟ್ಟಣದ ಬಸವ ಚೇತನ ಎಜುಕೇರ್ ಪ್ರಿ – ಪ್ರೈಮರಿ ಸ್ಕೂಲ್ ನಲ್ಲಿ “ಬಂಧುತ್ವ ಫೌಂಡೇಶನ್ ‘ ವತಿಯಿಂದ ಇಂದು ಶ್ರಾವಣಮಾಸದ ನಾಗರ ಪಂಚಮಿ ಪ್ರಯುಕ್ತ ” ಮಿಲ್ಕ್ ಫೆಸ್ಟ್”( ಹಾಲು ಹಬ್ಬ) ಎಂಬ ಕಾರ್ಯಕ್ರಮವನ್ನು ಮಕ್ಕಳಿಗೆ ಹಾಲು ಕುಡಿಸುವುದರ ಮೂಲಕ ವಿನೂತನವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ನಾಗರ ಪಂಚಮಿ ಹಬ್ಬದಂದು ನಮ್ಮ ಜನರು ಕಲ್ಲುನಾಗರಕ್ಕೆ ಮತ್ತು ಹುತ್ತಗಳಿಗೆ ಹಾಲು ಎರೆಯುವ ಸಂಪ್ರದಾಯವಿದೆ ಆದರೆ ಹಾವುಗಳು ಎಂದಿಗೂ ಹಾಲು ಕುಡಿಯುವುದಿಲ್ಲ, ಹಾಲು ಅದರ ಆಹಾರವಲ್ಲ ಹೀಗಿರುವಾಗ ಹಾಲನ್ನು ಈ ರೀತಿಯಲ್ಲಿ ಪೋಲು ಮಾಡುವ ಬದಲಾಗಿ ಅದೇ ಹಾಲನ್ನು ಮಕ್ಕಳಿಗೆ, ಬಡವರಿಗೆ, ರೋಗಿಗಳಿಗೆ ನೀಡಬೇಕು. ಹಾಲು ಅತ್ಯಂತ ಪೌಷ್ಟಿಕ ಆಹಾರವಾಗಿದ್ದು ಕರ್ನಾಟಕವೊಂದರಲ್ಲಿ ಪ್ರತಿವರ್ಷ ಸಾವಿರಾರು ಮಕ್ಕಳು ಅಪೌಷ್ಟಿಕತೆಯಿಂದ ಮರಣ ಹೊಂದುತ್ತಿದ್ದಾರೆ ಆದ್ದರಿಂದ ನಮ್ಮ ಜನರು ಈ ವಿಷಯವಾಗಿ ಜಾಗೃತರಾಗಬೇಕಿದೆ ಎಂದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ವಿದ್ಯಾ.ಕೆ.ಸಿ ಶಿಕ್ಷಕಿಯರಾದ ಮಧು.ಜಿ.ಓ, ಪೂಜಾ. ಎಂ.ಪಿ, ಉಜ್ಮಾ ನೂರೈನ್ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version