ದಿನದ ಸುದ್ದಿ
ಶಾಸಕ ಜಮೀರ್ ಅಹ್ಮದ್ ಖಾನ್ ಮುಂದಿನ ಸಿಎಂ ಆಗಲಿ : ಪಂಚಾಕ್ಷರಿ ಸ್ವಾಮೀಜಿ
ಸುದ್ದಿದಿನ,ಬೆಳಗಾವಿ: ಶಿವಾಜಿನಗರ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮುಂದಿನ ಸಿಎಂ ಆಗಲಿ ಎಂದು ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದ ವಿರಕ್ತಮಠದ ಪಂಚಾಕ್ಷರಿ ಸ್ವಾಮೀಜಿ ಹೇಳಿದ್ದಾರೆ.
ಬೆಳಗಾವಿ ಪ್ರವಾಸದಲ್ಲಿರುವ ಶಾಸಕ ಜಮೀರ್ ಅಹ್ಮದ್ ಖಾನ್, ಯಕ್ಕುಂಡಿ ಗ್ರಾಮದ ಐತಿಹಾಸಿಕ ದರ್ಗಾ ಹಾಗೂ ವಿರಕ್ತ ಮಠಕ್ಕೆ ಭೇಟಿ ನೀಡಿದ ವೇಳೆ ವೇದಿಕೆ ಕಾರ್ಯಕ್ರಮದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ.
ಜಮೀರ್ ಅಹ್ಮದ್ ಮುಂದೆ ಸಿಎಂ ಆಗಲಿ ಎಂದು ಆಶೀರ್ವಾದ ಮಾಡಿದ್ದಾರೆ. ಬಳಿಕ ಜಮೀರ್ ಸ್ವಾಮೀಜಿಯ ಅವರ ಕೇಳಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243