ದಿನದ ಸುದ್ದಿ
ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳ್ಳಲಿ : ಉಕ್ರೇನ್ ವಧು, ಹೈದರಾಬಾದ್ ವರ ಪ್ರಾರ್ಥನೆ
ಸುದ್ದಿದಿನ,ಹೈದರಾಬಾದ್: ಉಕ್ರೇನ್ ನ ಯುವತಿಯ ಜೊತೆ ಹೈದರಾಬಾದ್ ಯುವಕ ವಿವಾಹವಾಗಿದ್ದು, ಆರತಕ್ಷತೆಯ ಸಮಾರಂಭದ ವೇಳೆ ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರತೀಕ್ ಮತ್ತು ಲ್ಯುಬೊವ್ ಉಕ್ರೇನ್‍ನಲ್ಲಿ ಮದುವೆಯಾಗಿದ್ದರು. ಆರಕ್ಷತೆಗಾಗಿ ಹೈದರಾಬಾದ್‍ಗೆ ಬಂದ ಮರುದಿನವೇ ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಘೋಷಣೆ ಮಾಡಿತ್ತು. ಹೀಗಾಗಿ ವಧುವಿನ ಆತ್ಮಸ್ಥೈರ್ಯ ಕುಂದದಂತೆ ನೋಡಿಕೊಂಡ ಪ್ರತೀಕ್ ಪೋಷಕರು, ಆಕೆಗೆ ಮಾನಸಿಕವಾಗಿ ಬೆಂಬಲ ನೀಡಿದ್ದಾರೆ.
ಇತ್ತೀಚೆಗೆ ಹೈದರಾಬಾದ್‍ನಲ್ಲಿ ಉಕ್ರೇನಿಯನ್ ವಧು ಲ್ಯುಬೊವ್ ಮತ್ತು ಹೈದರಬಾದ್‍ನ ವರ ಪ್ರತೀಕ್ಷ್ ಮದುವೆ ಆರತಕ್ಷತೆ ಸಮಾರಂಭದಲ್ಲಿ, ಅರ್ಚಕ ರಂಗರಾಜನ್ ಭಾಗವಹಿಸಿದ್ದರು. ದೇವರ ವಿಶೇಷ ವಸ್ತ್ರಗಳನ್ನ ಮತ್ತು ಸ್ಮರಣಿಕೆಗಳನ್ನು ಕೊಟ್ಟು, ನವವಿವಾಹಿತರನ್ನು ಆಶೀರ್ವದಿಸಿದರು. ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ಯುದ್ಧ ಅಂತ್ಯವಾಗಿ, ಕೂಡಲೇ ಶಾಂತಿ ನೆಲೆಸುವಂತಾಗಲಿ ಎಂದು ಚಿಲುಕೂರಿನ ಬಾಲಾಜಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಯಿತು ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ಶೀಘ್ರ ಅಂತ್ಯಗೊಳ್ಳಲಿ ಎಂದು ಚಿಲುಕೂರು ವೆಂಕಟೇಶ್ವರ ಸ್ವಾಮಿಯಲ್ಲಿ ಪ್ರಾರ್ಥಿಸುತ್ತೇವೆ. ಯುದ್ಧವು ಪ್ರಪಂಚದಾದ್ಯಂತ ರಕ್ತಪಾತ ಮತ್ತು ದುರಂತಕ್ಕೆ ಕಾರಣವಾಯಿತು. ಕೋವಿಡ್‍ನ ದುರತದಿಂದ ಚೇತರಿಕೊಳ್ಳುವುದಕ್ಕೂ ಮುಂಚೆಯೇ ರಷ್ಯಾ ಉಕ್ರೇನ್ ಮೇಲೆ ದಾಳಿ ಆತಂಕವನ್ನ ಸೃಷ್ಟಿಸಿದೆ ಆದಷ್ಟು ಬೇಗ ಯುದ್ದ ಕೊನೆಯಾಗಲಿ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243