ದಿನದ ಸುದ್ದಿ

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 34ನೇ ವಾರ್ಡಿನ ಕುದುಕ್ಕೋರಿಗುಡ್ಡ ಪ್ರದೇಶ ಗ್ರಂಥಾಲಯದಲ್ಲಿ ಖಾಲಿ ಇರುವ ಒಂದು ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ರೂ. 5,000 ಆಧಾರದ ಮೇಲೆ ಭರ್ತಿ ಮಾಡಲು ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಅದೇ 34ನೇ ವಾರ್ಡಿನ ಕುದುಕ್ಕೋರಿಗುಡ್ಡ ಪ್ರದೇಶದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ನವೆಂಬರ್ 26 ರೊಳಗೆ ಅರ್ಜಿ ಆಹ್ವಾನಿಸಿದೆ. ಮೇಲ್ವಿಚಾರಕರ ಸ್ಥಾನವು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುತ್ತದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಮುಖ್ಯ ಗ್ರಂಥಾಲಯ ಅಧಿಕಾರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಜಿಲ್ಲಾಧಿಕಾರಿಯವರ ಕಛೇರಿ ಆವರಣ, ದೂ.ಸಂಖ್ಯೆ: 0824-2441905 ಸಂಪರ್ಕಿಸಲು ಮುಖ್ಯ ಗ್ರಂಥಾಲಯಾಧಿಕಾರಿ(ಪ್ರಭಾರ), ಜಿಲ್ಲಾ ಕೇಂದ್ರ ಗ್ರಂಥಾಲಯ ಮಂಗಳೂರು ಇವರ ಪ್ರಕಟನೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version