ದಿನದ ಸುದ್ದಿ
ಉದ್ದಿಮೆ ವ್ಯಾಪಾರಸ್ಥರಿಗೆ ಪರವಾನಗಿ ಕಡ್ಡಾಯ
ಸುದ್ದಿದಿನ,ದಾವಣಗೆರೆ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಉದ್ದಿಮೆದಾರರು, ವ್ಯಾಪಾರಸ್ಥರು ಪಾಲಿಕೆ ವ್ಯಾಪ್ತಿಯಲ್ಲಿ ತಮ್ಮ ಉದ್ದಿಮೆ, ವ್ಯಾಪಾರ ನಡೆಸಲು ಪಾಲಿಕೆಯಿಂದ ಪರವಾನಗಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.
ಉದ್ದಿಮೆಗಳು, ಅಂಗಡಿಗಳು ಪರವಾನಗಿ ಪಡೆಯದೇ ವ್ಯಾಪಾರ ವಹಿವಾಟು ನಡೆಸುತ್ತಿರುವುದು ಕಂಡು ಬಂದಿರುತ್ತದೆ. ಈ ಪ್ರಕಟಣೆಯನ್ನು ತಿಳುವಳಿಕೆ ಪತ್ರ ಎಂದು ತಿಳಿದು ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಉದ್ದಿಮೆದಾರರು, ವ್ಯಾಪಾರಸ್ಥರು ಪಾಲಿಕೆಯಿಂದ ಪರವಾನಗಿ ಪಡೆಯುವುದು ಮತ್ತು ಪರವಾನಗಿ ಪಡೆದಿರುವವರು ನವೀಕರಿಸಿಕೊಳ್ಳಬಹುದು. ಇಲ್ಲವಾದಲ್ಲಿ ದಂಡ ವಿಧಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243