ಲೈಫ್ ಸ್ಟೈಲ್
ಒಂದು ಚಿಕ್ಕ ಬೆಳ್ಳುಳ್ಳಿ ಶಕ್ತಿ ಎಂತದ್ದು ಗೊತ್ತಾ ?
ಬೆಳ್ಳುಳ್ಳಿ ನೋಡದ ವ್ಯಕ್ತಿಗಳಿಲ್ಲ, ತಿನ್ನದ ಜನರಿಲ್ಲ. ಅನೇಕ ಆಹಾರ ಪದಾರ್ಥಗಳಲ್ಲಿ ಆಹ್ವಾದ ಹೆಚ್ಚಸಲು ಬೆಳ್ಳುಳ್ಳಿ ಪ್ರಧಾನವಾಗಿ ಬೇಕು. ಬೆಳ್ಳುಳ್ಳಿ ಸಾರು, ಬೆಳ್ಳುಳ್ಳಿ ಚಟ್ನಿ ಪುಡಿ ಅತ್ಯಂತ ರುಚಿಕರವಾದ ಆಹಾರಗಳಾಗಿವೆ.
ನೆಗಡಿಯಾದಾಗ ಹಿಂದೆ ಹಿರಿಯರ ಕಾಲದಲ್ಲಿ ಒಂದು ಬೆಳ್ಳುಳ್ಳಿ ಜಜ್ಜಿ ಒಂದು ಅರಿವೆಯಲ್ಲಿ ಕಟ್ಟಿ ವಾಸನೆ ನೋಡುತ್ತಿದ್ದರು. ಇದರಿಂದ ನೆಗಡಿ ಶಮನವಾಗುತ್ತಿತ್ತು. ಜತೆಗೆ ಬೆಳ್ಳುಳ್ಳಿ ಎಸಳು ಸುಟ್ಟು ಸೇವನೆ ಮಾಡುತ್ತಿದ್ದರು. ಬೆಳ್ಳುಳ್ಳಿಯಲ್ಲಿ ಅನೇಕ ಔಷಧೀಯ ಗುಣಗಳಿವ. ಜತೆಗೆ ಇದು ಕ್ರಿಮಿ ನಾಶಕದಂತೆ ಕೆಲಸ ಮಾಡುತ್ತದೆ ಕೂಡ.
Read This : ಕಾಯಿ ಕಾಯಿ ನುಗ್ಗೆಕಾಯಿ ಮಹಿಮೆ ಬಲ್ಲೀರೇನು: ಇಲ್ಲಿವೆ ನೋಡಿ ಆರೋಗ್ಯದ ಗುಟ್ಟು !
ಬೆಳ್ಳುಳ್ಳಿ ಸೇವೆನೆಯಿಂದ ಆಗುವ ಆರೋಗ್ಯದ ಉಪಯೋಗಗಳು
- ಬೆಳ್ಳುಳ್ಳಿ ಯನ್ನು ಬೇಯಿಸಿ ಆ ನೀರಿನಿಂದ ಗಾಯ ವನ್ನು ತೊಳೆದರೆ ಗಾಯ ಬೇಗನೆ ವಾಸಿಯಾಗುತ್ತದೆ.
- ತೂಕ ಹೆಚ್ಚು ಇರುವವರು ಪ್ತಿದಿನ ಆಹಾರದಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ತೂಕ ಕಡಿಮೆಯಾಗುತ್ತದೆ.
- ಬೆಳ್ಳುಳ್ಳಿ ರಸವನ್ನು ಜೇನು ತುಪ್ಪದಲ್ಲಿ ಬೆರಸಿ ಸೇವಿಸುವುದರಿಂದ ಹೊಟ್ಟೆಯಲ್ಲಿ ಇರುವ ಜಂತು ಹುಳುಗಳು ಶಮನವಾಗುತ್ತವೆ.
- ಬೆಣ್ಣೆಯಲ್ಲಿ ಬೆಳ್ಳುಳ್ಳಿ ತೇದು ಗಾಯಗಳಿಗೆ ಹಚ್ಚಿದರೆ ಗಾಯ ವಾಸಿಗಾಯತ್ತವೆ ಎಂದು ಹಿರಿಯರು ಹೇಳುತ್ತಾರೆ.
- ಬೆಳ್ಳುಳ್ಳಿ ಭಾರತ ಹಾಗೂ ಅನ್ಯ ಪ್ರದೇಶಗಳ ಭೋಜನ ಪದಾರ್ಥಗಳಲ್ಲಿ ಒಂದು ಪ್ರಿಯವಾದ ಪದಾರ್ಥ.
- ಇತ್ತೀಚಿನ ಸಂಶೋಧನೆಗಳಲ್ಲಿ ಬೆಳ್ಳುಳ್ಳಿಯನ್ನು ಸೊಳ್ಳೆ, ನುಸಿ, ನೊಣ ಹಾಗೂ ಇತರೆ ಕ್ರಿಮಿಗಳ ನಾಶಕ್ಕೆ ಬಳಕೆ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
garlic health benefits: Allicin in garlic gives incalculable medical advantages which incorporate battling chilly and hack, bringing down circulatory strain, battling heart infirmities, and counteracting Alzheimer’s. It additionally assuages ear infections, treat intestinal issues, fix wounds, forestall malignancy, and alleviate abundance gas.

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.
ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.
ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.
ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243



