ದಿನದ ಸುದ್ದಿ
ಸಾಲು ಸಾಲು ರಜೆ ; ಮೈಸೂರಿನಲ್ಲಿ ಹೆಚ್ಚಿದ ಪ್ರವಾಸಿಗರ ಸಂಖ್ಯೆ
ಸುದ್ದಿದಿನ, ಮೈಸೂರು : ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಪ್ರವಾಸೋದ್ಯಮದಲ್ಲಿ ಚೇತರಿಕೆ ಕಾಣುತ್ತಿದೆ.
ಶುಭ ಶುಕ್ರವಾರ ಹಾಗೂ ವಾರಾಂತ್ಯದ ರಜೆ ಇರುವುದರಿಂದ ಮೈಸೂರಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟ, ಕೆಆರ್‌ಎಸ್, ಜಗನ್ಮೋಹನ ಅರಮನೆ, ರಂಗನತಿಟ್ಟು ಪಕ್ಷಿಧಾಮ, ಕಾರಂಜಿ ಕೆರೆ, ನಂಜನಗೂಡು ಸೇರಿದಂತೆ ವಿವಿಧ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿವೆ.
ಮೈಸೂರು ನಗರ ಹಾಗೂ ಹೊರವಲಯದ ಹೋಟೆಲ್ ಕೊಠಡಿಗಳು ಶೇಕಡ 90 ರಷ್ಟು ಭರ್ತಿಯಾಗಿವೆ. ವ್ಯಾಪಾರ, ವಹಿವಾಟು ಚೆನ್ನಾಗಿ ನಡೆಯುತ್ತಿದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243