ದಿನದ ಸುದ್ದಿ
ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾದಿಂದ ಮೇ 26 ರಂದು ಬಸವ ಜಯಂತಿ – ಪ್ರತಿಭಾ ಪುರಸ್ಕಾರ
ಸುದ್ದಿದಿನ,ದಾವಣಗೆರೆ: ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾ ಜಿಲ್ಲಾಘಟಕದ ವತಿಯಿಂದ ಮೇ 26ರಂದು ಸಂಜೆ 4ಕ್ಕೆ ನಗರದ ಬಿಐಇಟಿ ಕಾಲೇಜು ಆವರಣದಲ್ಲಿರುವ ಎಸ್.ಎಸ್.ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ಬಸವ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಸಕ ಶಾಮನೂರು ಶಿವಶಂಕರಪ್ಪ ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಸ್.ಎಸ್.ಪಾಟೀಲ್ ಆಗಮಿಸಲಿದ್ದಾರೆ. ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷರಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಎಸ್.ಎಸ್.ಗಣೇಶ್ ಉಪಸ್ಥಿತರಿದ್ದು,ದೇವರಮನೆ ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಸಮಾರಂಭದಲ್ಲಿ ಬಸವತತ್ವ ಅನುಷ್ಠಾನದ ದಾರಿಗಳು ಕುರಿತು ಷಹಪುರದ ಬಸವ ಮಾರ್ಗದ ಸಂಪಾದಕ ವಿಶ್ವಾರಾಧ್ಯ ಸತ್ಯಂಪೇಟೆ ವಿಷಯ ಮಂಡನೆ ಮಾಡಲಿದ್ದಾರೆ. ಯುಪಿಎಸ್ ಇ ಎಐಆರ್ ನಲ್ಲಿ 101ನೇ ರ್ಯಾಂಕ್ ಪಡೆದ ಸೌಭಾಗ್ಯ ಎಸ್ ಬೀಳಗಿಮಠ, ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ಅಂಕಿತ ಬಸಪ್ಪ, ಜಿಲ್ಲೆಗೆ ಮೊದಲ ಸ್ಥಾನಪಡೆದ ಹೆಚ್.ಜಿ ಗಾನವಿ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.
ಇದೇ ವೇಳೆ 2021-22 ಹಾಗೂ 2022-23 ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅತ್ಯಧಿಕ ಅಂಕಗಳಿಸಿದ ಸುಮಾರು 500 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದೊಂದಿಗೆ ಸನ್ಮಾನಿಸಲಾಗುವುದು ಎಂದರು.
ಇದೇ ವೇಳೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನದ ಯಶಸ್ಸಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಸಮಾರಂಭದಲ್ಲಿ ಶ್ರೀ ಸಿದ್ದರಾಮ ಕೇಸಾಪುರ ಮತ್ತು ತಂಡ,ಕಲರವ ಸಾಂಸ್ಕೃತಿಕ ವೇದಿಕೆ ಬೆಂಗಳೂರು ಹಾಗೂ ಕದಳಿವೇದಿಕೆ ವತಿಯಿಂದ ವಚನಗೀತೆ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅಣಬೇರು ರಾಜಣ್ಣ, ಬಿ.ಜೆ.ರಮೇಶ್, ಐಗೂರು ಚಂದ್ರಶೇಖರ್, ಪ್ರಕಾಶ್ ಪಾಟೀಲ್, ಶುಭ ಐನಳ್ಳಿ, ಶಿವಕುಮಾರ್ ಕೊರಟಗೆರೆ, ಸುನೀಲ್ ಬಾಗೇವಾಡಿ, ನಿಧಿ ಐನಮಹಾಸಭಾದಳ್ಳಿ ಇತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


