Connect with us

ದಿನದ ಸುದ್ದಿ

ಬೆಳಗಿನ ಪ್ರಮುಖ ಸುದ್ದಿಗಳು

Published

on

ಬೆಳಗಿನ ಪ್ರಮುಖ ಸುದ್ದಿಗಳು

  1. ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಮಧ್ಯಪ್ರದೇಶ ಪ್ರಕರಣದಲ್ಲಿ ಸುಪ್ರಿಂಕೋರ್ಟ್ ನೀಡಿರುವ ತೀರ್ಪಿನ ಕುರಿತು ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸರ್ಕಾರ, ಮುಂದಿನ ನಡೆಯ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
  2. ರಾಜ್ಯಕ್ಕೆ ಅಗತ್ಯ ಪ್ರಮಾಣದಲ್ಲಿ ಯೂರಿಯಾ ಮತ್ತು ಡಿ.ಎ.ಪಿ ರಸಗೊಬ್ಬರವನ್ನು ಪೂರೈಕೆ ಮಾಡುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್ಸುಖ್ ಮಾಂಡವೀಯ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
  3. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರಾವಳಿಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಇನ್ನೂ 3ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
  4. ಡಾ.ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್ ವತಿಯಿಂದ ನೀಡುವ ಸಾಹಿತ್ಯ ಕ್ಷೇತ್ರದ ಪ್ರತಿಷ್ಠಿತ ಮಾಸ್ತಿ ಪ್ರಶಸ್ತಿ- 2022ಕ್ಕೆ ಡಾ.ಕೆ.ವಿ.ನಾರಾಯಣ, ಡಾ.ಓ.ಎಲ್. ನಾಗಭೂಷಣ ಸ್ವಾಮಿ ಸೇರಿದಂತೆ 7 ಮಂದಿ ಆಯ್ಕೆಯಾಗಿದ್ದಾರೆ. ಅವರಿಗೆ ಜೂನ್ 18ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
  5. ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಜೆಡಿಎಸ್ ಕೈಗೊಂಡಿರುವ ಜನತಾ ಜಲಧಾರೆ ಕಾರ್ಯಕ್ರಮ ನಾಳೆ ಸಮಾಪನಗೊಳ್ಳಲಿದೆ.
  6. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಭರೂಚ್‌ನಲ್ಲಿ ನಡೆಯಲಿರುವ ಉತ್ಕರ್ಷ್ ಸಮಾವೇಶ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ. ಅಗತ್ಯವಿರುವವರಿಗೆ ಸಕಾಲದಲ್ಲಿ ಆರ್ಥಿಕ ನೆರವು ನೀಡುವ ರಾಜ್ಯ ಸರ್ಕಾರದ ನಾಲ್ಕು ಯೋಜನೆಗಳು ಜಿಲ್ಲೆಯಲ್ಲಿ ಶೇಕಡ ನೂರಕ್ಕೆ ನೂರಷ್ಟು ಅನುಷ್ಠಾನಗೊಂಡಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
  7. ಕಾಂಗ್ರೆಸ್ ಪಕ್ಷ ಇದುವರೆಗೆ ಆಡಳಿತ ನಡೆಸಿರುವ ಎಲ್ಲ ರಾಜ್ಯಗಳಲ್ಲಿ ದೇಶದ್ರೋಹ ಕಾನೂನನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿಯ ವಕ್ತಾರ ಗೌರವ್ ಭಾಟಿಯಾ ಅವರು ಮಹಾರಾಷ್ಟ್ರ, ರಾಜಸ್ಥಾನ ಮತ್ತು ಛತ್ತೀಸಗಢ ರಾಜ್ಯಗಳಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 124ಎ ದುರ್ಬಳಕೆ ಮಾಡಿಕೊಂಡಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಕೆ ಮೌನವಾಗಿದ್ದರು ಎಂದು ಪ್ರಶ್ನಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending